ಬೆಂಗಳೂರು: ಬಿಜೆಪಿ ಸರಕಾರವು ರಾಜ್ಯದ ಕೇವಲ ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಮಮತೆಯನ್ನು ನಮ್ಮ ಕರ್ನಾಟಕದಲ್ಲಿ ಮೂಲೆ ಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, 2011 ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆ ಮಾತನಾಡುವವರ ಸಂಖ್ಯೆ 1,13,857. ಆದರೆ ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರಕಾರ ಮಮತೆ ತೋರಿಸುತ್ತಾ ಬಂದಿದೆ ಎಂದು ಆರೋಪಿಸಿದ್ದಾರೆ.
ಇನ್ನು ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದ್ದು, ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಸರ್ಕಾರ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದಿದ್ದಾರೆ.
ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…