Featured

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್ – Vishwanews24

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಅವರು ಮಂಗಳೂರಿನ “ತುಳು ಭವನ”ದಲ್ಲಿ ನಡೆದ “ತುಳು ಸಂವಾದ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕು ಎನ್ನುವುದು ಎಂಬುದು ನಮ್ಮೆಲ್ಲರ ಒಕ್ಕೊರಲ ಬೇಡಿಕೆ. ಆ ನಿಟ್ಟಿನಲ್ಲಿ ಶಾಸಕನಾದ ದಿನದಿಂದಲೂ ಕಾರ್ಯ ವ್ಯಾಪ್ತಿಯಲ್ಲಿ ಪ್ರಯತ್ನಿಸುತ್ತಿದ್ದೇನೆ. ಬೇರೆ ರಾಜ್ಯಗಳು ಒಂದಕ್ಕಿಂತ ಅಧಿಕ ಭಾಷೆಗಳನ್ನು ಹೇಗೆ ಅಧಿಕೃತ ಭಾಷೆಯನ್ನಾಗಿ ಮಾಡಿದ್ದಾರೆ ಎಂಬ ವರದಿ ಈಗಾಗಲೇ ಸರಕಾರದ ಮುಂದಿದೆ. ಈ ನಿಟ್ಟಿನಲ್ಲಿ 95% ಕೆಲಸಗಳು ಪೂರ್ಣಗೊಂಡಿದ್ದು, 5% ಕೆಲಸಗಳಷ್ಟೇ ಬಾಕಿಯಿದೆ. ಅದು ಕೂಡಾ ಆದಷ್ಟು ಶೀಘ್ರದಲ್ಲಿ ಆಗಬೇಕೆನ್ನುದು ನಮ್ಮೆಲ್ಲರ ಆಶಯವಾಗಿದೆ. ಅನೇಕ ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಮತ್ತೆ ಆಗ್ರಹಿಸುತ್ತೇನೆ ಎಂದರು.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

11 minutes ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

21 minutes ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

28 minutes ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

36 minutes ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

54 minutes ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

1 hour ago