ಹಳೆಯಂಗಡಿ: ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಅಭ್ಯಸಿಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ 3.6 ಕೋ.ರೂ. ಬಿಡುಗಡೆಯಾಗಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದರು.
ಈ ಬಗ್ಗೆ ಮಾತನಾಡಿದ ದಯನಂದ ಜಿ. ಕತ್ತಲ್‌ಸಾರ್ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರವು ಪುರಸ್ಕರಿಸಿದ್ದು ಭೇಟಿ ಫಲಪ್ರದವಾಗಿದೆ. ಅಲ್ಲದೇ ತುಳು ಭವನಕ್ಕೆ ಬಿಡುಗಡೆಯಾಗಿರುವ 3.6 ಕೋ.ರೂ.ಗೆ ಆಡಳಿತಾತ್ಮಕ ಅನುಮೋದನೆ ಶೀಘ್ರವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…