ಕೋಲ್ಕತ್ತಾ: ಬಿಜೆಪಿಯ ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹ ಕೋಲ್ಕತ್ತಾದಲ್ಲಿ ಶನಿವಾರ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಸಿನ್ಹ ಅವರ ತೃಣಮೂಲ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕೆಲ ವರ್ಷಗಳ ಹಿಂದೆ ಬಿಜೆಪಿಯನ್ನು ತೊರೆದಿದ್ದ ಸಿನ್ಹ 2020ರ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ರಾಜಕೀಯ ಪಕ್ಷವೊಂದನ್ನು ಆರಂಭಿಸಿದ್ದರು.
ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಯಶವಂತ್ ಸಿನ್ಹ ಅವರು, ಅಟಲ್ ಬಿಹಾರಿ ವಾಜಪೇಯಿಯವರ ಕಾಲದಲ್ಲಿ ಬಿಜೆಪಿಯಲ್ಲಿ ಸಹಮತಕ್ಕೆ ಬೆಲೆ ನೀಡುತ್ತಿದ್ದರು. ಆದರೆ ಇಂದಿನ ಬಿಜೆಪಿ ಸರ್ಕಾರದಲ್ಲಿ ಇನ್ನೊಬ್ಬರನ್ನು ತುಳಿದು ಮೇಲೆ ಬರುವುದರ ಮೇಲೆ ನಂಬಿಕೆಯಿಟ್ಟಿದ್ದಾರೆ. ಅಕಾಲಿ ದಳ, ಬಿಜೆಡಿಯವರು ಬಿಜೆಪಿ ತೊರೆದಿದ್ದಾರೆ. ಇಂದು ಯಾರು ಬಿಜೆಪಿಯೊಟ್ಟಿಗೆ ಇದ್ದಾರೆ ಹೇಳಿ, ಬಿಜೆಪಿಯ ನೀತಿ, ಆಡಳಿತ ಯಾರಿಗೂ ಇಷ್ಟವಾಗುತ್ತಿಲ್ಲ ಎಂದರು.
ಇಂದು ನ್ಯಾಯಾಂಗ ಸೇರಿದಂತೆ ಪ್ರಜಾಪ್ರಭುತ್ವದ ಎಲ್ಲಾ ಸಂಸ್ಥೆಗಳು ದೇಶದಲ್ಲಿ ದುರ್ಬಲಗೊಳ್ಳುತ್ತಿವೆ. ಹಿಂದೆಂದೂ ಕಂಡರಿಯದ ಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…