ಮಂಗಳೂರು : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರಿಗೆ ಜಮೀನು ಕಾದಿರಿಸುವ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದೇನೆ ಮತ್ತು ಇನ್ನೂ ಕೆಲವು ಜಮೀನುಗಳ ವಿಚಾರಗಳು ಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿದೆ ಆದಷ್ಟೂ ಬೇಗನೆ ಈ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ ಹಾಗೂ ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿರುವ ಸರ್ಕಾರಿ ಜಮೀನುಗಳನ್ನು ಸರ್ವೆ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯ ಬದ್ಧವಾಗಿ ವಿತರಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಉಳ್ಳಾಲ ಶಾಸಕ ಯು ಟಿ ಖಾದರ್, ಮೂಡಬಿದ್ರೆ ಶಾಸಕ ಊಮಾನಾಥ ಕೋಟ್ಯಾನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…