ಬೆಂಗಳೂರು: ತೆರಿಗೆ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಬಿದ್ದಿದೆ.
ತೆರಿಗೆ ಕಟ್ಟದ ಆರೋಪ ಎದುರಿಸುತ್ತಿರುವ ನಗರದ ಪ್ರತಿಷ್ಠಿತ ಮಂತ್ರಿಮಾಲ್ಗೆ ಮತ್ತೆ ಬಿಬಿಎಂಪಿ ಬೀಗ ಜಡಿದಿದೆ. 27 ಕೋಟಿ ರೂಪಾಯಿ ತೆರಿಗೆಯನ್ನ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ಅಧಿಕಾರಿಗಳಿಂದ ಮಂತ್ರಿಮಾಲ್ಗೆ ಬೀಗ ಹಾಕಿದ್ದಾರೆ.
ಳೆದ 3 ವರ್ಷಗಳಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 34.49 ಕೋಟಿ ರೂ. ತೆರಿಗೆಯನ್ನು ಪಾವತಿಸಿಲ್ಲ. ಪದೇ ಪದೇ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿದ ಕಾರಣ ಬಿಬಿಎಂಪಿ ಅಧಿಕಾರಿಗಳು ಮತ್ತೊಮ್ಮೆ ಮಾಲ್‌ಗೆ ಬೀಗ ಹಾಕಿ ಶಾಕ್ ನೀಡಿದ್ದಾರೆ. ತೆರಿಗೆ ಬಾಕಿ ಹಿನ್ನೆಲೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್ಗೆ ಬೀಗ ಹಾಕಿದ್ದರು.
ಆದರೆ, ನವೆಂಬರ್ ಅಂತ್ಯದೊಳಗೆ ತೆರಿಗೆ ಪಾವತಿಸುವುದಾಗಿ ಮಂತ್ರಿ ಮಾಲ್ ಆಡಳಿತ ಮಂಡಳಿ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರಿಂದ ಮತ್ತೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಗಡುವು ಮೀರಿದ್ದರಿಂದ ಸೋಮವಾರ ಮತ್ತೆ ಬಿಬಿಎಂಪಿ ಅಧಿಕಾರಿಗಳು ಮಾಲ್ಗೆ ಬೀಗ ಜಡಿದಿದ್ದಾರೆ.
ನವೆಂಬರ್ 15ಕ್ಕೂ ಮುಂಚೆ ಅಕ್ಟೋಬರ್ 1ರಂದು ಕೂಡ ಮಂತ್ರಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದರು. ಆಗ ಒಟ್ಟು ತೆರಿಗೆಯಲ್ಲಿ 5 ಕೋಟಿ ರೂ, ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ನವೆಂಬರ್ 15ಕ್ಕೆ ಬೀಗ ಹಾಕಲಾಗಿತ್ತು.
ಮಂತ್ರಿ ಮಾಲ್ ಆಡಳಿತ ಮಂಡಳಿ 2018-19ರಲ್ಲಿ 12.47 ಕೋಟಿ ರೂ., 2019-20ರಲ್ಲಿ 10.84 ಕೋಟಿ ರೂ., 2020-21ರಲ್ಲಿ 9.21 ಕೋಟಿ ರೂ. ಹಾಗೂ 2021-22ರಲ್ಲಿ 6.95 ಕೋಟಿ ರೂ. ಸೇರಿ ಒಟ್ಟು 39.49 ಕೋಟಿ ಆಸ್ತಿ ತೆರಿಗೆ ಪಾವತಿಸಬೇಕಿತ್ತು. ಇದರಲ್ಲಿ ಆಸ್ತಿ ತೆರಿಗೆ ಮೊತ್ತ 27.22 ಕೋಟಿ ರೂ.ಗಳಾಗಿದ್ದು, ಬಡ್ಡಿ 12.26 ಕೋಟಿ ರೂ.ಗಳಾಗಿದೆ. ಇದರಲ್ಲಿ 5 ಕೋಟಿ ರೂ.ಗಳನ್ನು ಅಕ್ಟೋಬರ್‌ನಲ್ಲಿ ಪಾವತಿ ಮಾಡಿದ್ದರು.
2018–19ನೇ ಸಾಲಿನಲ್ಲಿ 10.43 ಕೋಟಿ ರೂ. ಆಸ್ತಿ ತೆರಿಗೆ ಪಾವತಿಗಾಗಿ ಕಟ್ಟಡದ ಮಾಲೀಕರು ಚೆಕ್ ನೀಡಿದ್ದರು. ಅವರ ಬ್ಯಾಂಕ್ ಖಾತೆಯಲ್ಲಿ ಸಾಕಷ್ಟು ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಬಿಬಿಎಂಪಿಯು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…