Featured

ತೆರಿಗೆ ಬಾಕಿ ವಿವಾದ ; ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ – Vishwanews24

ತೆರಿಗೆ ಬಾಕಿ ವಿವಾದ ; ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ – Vishwanews24

ಕಳೆದ ಮೂರು ವರ್ಷಗಳಿಂದ ಸುಮಾರು 29 ಕೋಟಿ ರೂ. ತೆರಿಗೆ ಬಾಕಿ..

ಬೆಂಗಳೂರು: ತೆರಿಗೆ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಬಿದ್ದಿದೆ.

ತೆರಿಗೆ ಕಟ್ಟದ ಆರೋಪ ಎದುರಿಸುತ್ತಿರುವ ನಗರದ ಪ್ರತಿಷ್ಠಿತ ಮಂತ್ರಿಮಾಲ್​ಗೆ ಮತ್ತೆ ಬಿಬಿಎಂಪಿ ಬೀಗ ಜಡಿದಿದೆ. 27 ಕೋಟಿ ರೂಪಾಯಿ ತೆರಿಗೆಯನ್ನ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ಅಧಿಕಾರಿಗಳಿಂದ ಮಂತ್ರಿಮಾಲ್​ಗೆ ಬೀಗ ಹಾಕಿದ್ದಾರೆ.

ಳೆದ 3 ವರ್ಷಗಳಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 34.49 ಕೋಟಿ ರೂ. ತೆರಿಗೆಯನ್ನು ಪಾವತಿಸಿಲ್ಲ. ಪದೇ ಪದೇ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿದ ಕಾರಣ ಬಿಬಿಎಂಪಿ ಅಧಿಕಾರಿಗಳು ಮತ್ತೊಮ್ಮೆ ಮಾಲ್‌ಗೆ ಬೀಗ ಹಾಕಿ ಶಾಕ್‌ ನೀಡಿದ್ದಾರೆ. ತೆರಿಗೆ ಬಾಕಿ ಹಿನ್ನೆಲೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್ಗೆ ಬೀಗ ಹಾಕಿದ್ದರು.

ಆದರೆ, ನವೆಂಬರ್‌ ಅಂತ್ಯದೊಳಗೆ ತೆರಿಗೆ ಪಾವತಿಸುವುದಾಗಿ ಮಂತ್ರಿ ಮಾಲ್‌ ಆಡಳಿತ ಮಂಡಳಿ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರಿಂದ ಮತ್ತೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಗಡುವು ಮೀರಿದ್ದರಿಂದ ಸೋಮವಾರ ಮತ್ತೆ ಬಿಬಿಎಂಪಿ ಅಧಿಕಾರಿಗಳು ಮಾಲ್‌ಗೆ ಬೀಗ ಜಡಿದಿದ್ದಾರೆ.

ನವೆಂಬರ್‌ 15ಕ್ಕೂ ಮುಂಚೆ ಅಕ್ಟೋಬರ್‌ 1ರಂದು ಕೂಡ ಮಂತ್ರಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದರು. ಆಗ ಒಟ್ಟು ತೆರಿಗೆಯಲ್ಲಿ 5 ಕೋಟಿ ರೂ, ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ನವೆಂಬರ್‌ 15ಕ್ಕೆ ಬೀಗ ಹಾಕಲಾಗಿತ್ತು.

ಮಂತ್ರಿ ಮಾಲ್‌ ಆಡಳಿತ ಮಂಡಳಿ 2018-19ರಲ್ಲಿ 12.47 ಕೋಟಿ ರೂ., 2019-20ರಲ್ಲಿ 10.84 ಕೋಟಿ ರೂ., 2020-21ರಲ್ಲಿ 9.21 ಕೋಟಿ ರೂ. ಹಾಗೂ 2021-22ರಲ್ಲಿ 6.95 ಕೋಟಿ ರೂ. ಸೇರಿ ಒಟ್ಟು 39.49 ಕೋಟಿ ಆಸ್ತಿ ತೆರಿಗೆ ಪಾವತಿಸಬೇಕಿತ್ತು. ಇದರಲ್ಲಿ ಆಸ್ತಿ ತೆರಿಗೆ ಮೊತ್ತ 27.22 ಕೋಟಿ ರೂ.ಗಳಾಗಿದ್ದು, ಬಡ್ಡಿ 12.26 ಕೋಟಿ ರೂ.ಗಳಾಗಿದೆ. ಇದರಲ್ಲಿ 5 ಕೋಟಿ ರೂ.ಗಳನ್ನು ಅಕ್ಟೋಬರ್‌ನಲ್ಲಿ ಪಾವತಿ ಮಾಡಿದ್ದರು.

2018–19ನೇ ಸಾಲಿನಲ್ಲಿ 10.43 ಕೋಟಿ ರೂ. ಆಸ್ತಿ ತೆರಿಗೆ ಪಾವತಿಗಾಗಿ ಕಟ್ಟಡದ ಮಾಲೀಕರು ಚೆಕ್‌ ನೀಡಿದ್ದರು. ಅವರ ಬ್ಯಾಂಕ್‌ ಖಾತೆಯಲ್ಲಿ ಸಾಕಷ್ಟು ಹಣವಿಲ್ಲದ ಕಾರಣ ಚೆಕ್‌ ಬೌನ್ಸ್‌ ಆಗಿತ್ತು. ಈ ಸಂಬಂಧ ಬಿಬಿಎಂಪಿಯು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ.

Vishwa News 24

Recent Posts

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

35 minutes ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

40 minutes ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

46 minutes ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ – vishwanews24

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…

54 minutes ago

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ – vishwanews24

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…

1 hour ago

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…

1 hour ago