ಶಿವಮೊಗ್ಗ : ಲೋಕಸಭಾ ಚುನಾವಣೆ ಪ್ರಚಾರವನ್ನು ಅದ್ಧೂರಿಯಾಗಿ ಆರಂಭಿಸಿರುವ ಬಿಜೆಪಿ ಇದೀಗ ಕರ್ನಾಟಕದಲ್ಲಿ ಎರಡನೇ ಸಮಾವೇಶ ಆಯೋಜಿಸಿದೆ. ಕಲಬುರಗಿ ಬಳಿಕ ಶಿವಮೊಗ್ಗದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದಾರೆ. ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಗೆ ಆಗಮಿಸಿದರು. ಈ ವೇಳೆ ಕಾರ್ಯಕರ್ತರ ಜಯ ಘೋಷ, ಮೋದಿ ಮೋದಿ ಘೋಷಣೆ, ಬಾರತ್ ಮಾತಾ ಕಿ ಜೈಕಾರದಿಂದ ಸಭೆ ಝೇಂಕರಿಸಿತ್ತು.
ಪ್ರಧಾನಿ ಮೋದಿಯ ಬೃಹತ್ ಸಮಾವೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಘಟಾನಘಟಿ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತರಿದ್ದಾರೆ. ಇದರ ಜೊತೆಗೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್, ದಾವಣಗೆರೆ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್, ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಉಪಸ್ಥಿತಿರಿದ್ದಾರೆ. ಈ ಸಮಾವೇಶದಲ್ಲಿ ಜೆಡಿಎಸ್ ಶಾಸಕಿ ಶಾರದ ಪುರಿ ನಾಯಕ್ ಗೂ ಅವಕಾಶ ನೀಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…