Featured

ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್ ವಿಧಿವಶ -Vishwanews24

ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್(39) ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ.

ವೇಣು ಮಾಧವ್ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚಿಗಷ್ಟೇ ಅವರನ್ನು ಸಿಕಂದರಬಾದ್‍ನಲ್ಲಿರುವ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ವೇಣು ಮಾಧವ್ ಅವರ ಯಕೃತ್ತು ತೀವ್ರ ಹಾನಿಗೆ ಒಳಗಾಗಿತ್ತು. ಹೀಗಾಗಿ ಅವರಿಗೆ ಯಕೃತ್ ಕಸಿ ಮಾಡುವ ಅವಶ್ಯಕತೆ ಇತ್ತು. ಆದರೆ ವೇಣುಮಾಧವನ್ ಸ್ಥಿತಿ ತೀವ್ರ ಚಿಂತಾಜನಕವಾಗಿದ್ದು, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇವರು ತೆಲಗು, ತಮಿಳು ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇದುವರೆಗೂ ಅವರು 170ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಟ ಚಿರಂಜೀವಿ, ಪ್ರಭಾಸ್, ಅಲ್ಲು ಅರ್ಜುನ್, ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಸೇರಿದಂತೆ ಮೇರು ನಟರ ಜೊತೆ ನಟಿಸಿದ್ದರು. 1996 ರಲ್ಲಿ ಸಿನಿರಂಗ ಪ್ರವೇಶಿಸಿದ ಅವರು, ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago