Featured

ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಅರೆಸ್ಟ್‌ – vishwanews24

ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಅರೆಸ್ಟ್‌

ಅಮರಾವತಿ: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಫೆ.26ರ ರಾತ್ರಿ 8:45ರ ಸುಮಾರಿಗೆ ಆಂಧ್ರ ಪ್ರದೇಶದ ಪೊಲೀಸರು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.

ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.

ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್‌ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

3 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago