ಕಲಬುರ್ಗಿ: “ತೈಲ ಬೆಲೆ ಹೆಚ್ಚಾಗಿದ್ದರೂ ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ” ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾರಿಗೆ ಸಂಸ್ಥೆಗಳಿಂದ ಬಸ್ ಪ್ರಯಣ ದರ ಹೆಚ್ಚಳ ಮಾಡುವಂತೆ ಪ್ರಸ್ತಾವ ಬಂದಿದ್ದು, ಆದರೆ, ಕೊರೊನಾ ಹಾಗೂ ನೈಸರ್ಗಿಕ ವಿಕೋಪಗಳ ಕಾರಣದಿಂದ ಈಗಾಗಲೇ ಜನರು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಹೀಗಿರುವಾಗ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ್ದಲ್ಲಿ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ” ಎಂದರು.
“ಕಳೆದ ಬಾರಿಯ ಬಜೆಟ್‌ನಲ್ಲಿ ತಲಾ ಒಂದು ಸಾವಿರ ಹೊಸ ಬಸ್‌ಗಳನ್ನು ಸಾರಿಗೆ ಸಂಸ್ಥೆಯ ನಾಲ್ಕೂ ಘಟಕಗಳಿಗೆ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ, ಸರ್ಕಾರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ಕಾರಣದಿಂದ ಆ ಘೋಷಣೆ ಈಡೇರಲಿಲ್ಲ. ಈಗಾಗಲೇ ಶೇ.90ರಷ್ಟು ಬಸ್‌ಗಳ ಓಡಾಟ ಪ್ರಾರಂಭವಾಗಿದೆ. ಎಪ್ರಿಲ್ ತಿಂಗಳ ಅಂತ್ಯದಲ್ಲಿ ಪುನಃ ಮೊದಲಿಗೆ ಸ್ಥಿತಿಗೆ ಬರಬಹುದು. ಈ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಈಶಾನ್ಯ ಸೇರಿದಂತೆ ವಾಯುವ್ಯ ಸಾರಿಗೆ ಸಂಸ್ಥೆಗಳಿಗೆ ಹಾಗೂ ಕೆಎಸ್‌ಆರ್‌ಟಿಸಿಗೆ ತಲಾ ಒಂದು ಸಾವಿರ ಬಸ್‌ಗಳನ್ನು ನೀಡಲಾಗುವುದು” ಎಂದು ತಿಳಿಸಿದರು.
“ಹಳೆಯ ಬಸ್‌ಗಳನ್ನು ಗುಜರಿಗೆ ಹಾಕುವ ಬದಲು ಸ್ವಲ್ಪ ಸುಧಾರಣೆ ಮಾಡಿ, ಸಾಮಾಜಿಕ ಉದ್ದೇಶಗಳಿಗಾಗಿ ಉಪಯೋಗ ಮಾಡುವ ಉಪಾಯ ಮಾಡಲಾಗಿದ್ದು, ಇಂತಹ ಬಸ್‌ಗಳನ್ನು ಶೌಚಾಲಯ, ಡೇ ಕೇರ್ ಸೆಂಟರ್, ಹಾಲುಣಿಸುವ ಮಹಿಳೆಯರ ಕೇಂದ್ರಗಳಾಗಿ ಪರಿವರ್ತನೆ ಮಾಡಲಾಗುವುದು” ಎಂದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…