Featured

“ತೈಲ ಬೆಲೆ ಹೆಚ್ಚಾಗಿದ್ದರೂ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ ಮಾಡುವುದಿಲ್ಲ : ಲಕ್ಷ್ಮಣ ಸವದಿ -Vishwanews24

“ತೈಲ ಬೆಲೆ ಹೆಚ್ಚಾಗಿದ್ದರೂ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ ಮಾಡುವುದಿಲ್ಲ : ಲಕ್ಷ್ಮಣ ಸವದಿ -Vishwanews24

ಕಲಬುರ್ಗಿ: “ತೈಲ ಬೆಲೆ ಹೆಚ್ಚಾಗಿದ್ದರೂ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ ಮಾಡುವುದಿಲ್ಲ” ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾರಿಗೆ ಸಂಸ್ಥೆಗಳಿಂದ ಬಸ್‌ ಪ್ರಯಣ ದರ ಹೆಚ್ಚಳ ಮಾಡುವಂತೆ ಪ್ರಸ್ತಾವ ಬಂದಿದ್ದು, ಆದರೆ, ಕೊರೊನಾ ಹಾಗೂ ನೈಸರ್ಗಿಕ ವಿಕೋಪಗಳ ಕಾರಣದಿಂದ ಈಗಾಗಲೇ ಜನರು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಹೀಗಿರುವಾಗ ಬಸ್‌‌ ಪ್ರಯಾಣ ದರ ಹೆಚ್ಚಳ ಮಾಡಿದ್ದಲ್ಲಿ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ” ಎಂದರು.

“ಕಳೆದ ಬಾರಿಯ ಬಜೆಟ್‌‌ನಲ್ಲಿ ತಲಾ ಒಂದು ಸಾವಿರ ಹೊಸ ಬಸ್‌ಗಳನ್ನು ಸಾರಿಗೆ ಸಂಸ್ಥೆಯ ನಾಲ್ಕೂ ಘಟಕಗಳಿಗೆ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ, ಸರ್ಕಾರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ಕಾರಣದಿಂದ ಆ ಘೋಷಣೆ ಈಡೇರಲಿಲ್ಲ. ಈಗಾಗಲೇ ಶೇ.90ರಷ್ಟು ಬಸ್‌ಗಳ ಓಡಾಟ ಪ್ರಾರಂಭವಾಗಿದೆ. ಎಪ್ರಿಲ್‌ ತಿಂಗಳ ಅಂತ್ಯದಲ್ಲಿ ಪುನಃ ಮೊದಲಿಗೆ ಸ್ಥಿತಿಗೆ ಬರಬಹುದು. ಈ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌‌ನಲ್ಲಿ ಈಶಾನ್ಯ ಸೇರಿದಂತೆ ವಾಯುವ್ಯ ಸಾರಿಗೆ ಸಂಸ್ಥೆಗಳಿಗೆ ಹಾಗೂ ಕೆಎಸ್‌‌ಆರ್‌ಟಿಸಿಗೆ ತಲಾ ಒಂದು ಸಾವಿರ ಬಸ್‌‌ಗಳನ್ನು ನೀಡಲಾಗುವುದು” ಎಂದು ತಿಳಿಸಿದರು.

“ಹಳೆಯ ಬಸ್‌ಗಳನ್ನು ಗುಜರಿಗೆ ಹಾಕುವ ಬದಲು ಸ್ವಲ್ಪ ಸುಧಾರಣೆ ಮಾಡಿ, ಸಾಮಾಜಿಕ ಉದ್ದೇಶಗಳಿಗಾಗಿ ಉಪಯೋಗ ಮಾಡುವ ಉಪಾಯ ಮಾಡಲಾಗಿದ್ದು, ಇಂತಹ ಬಸ್‌‌ಗಳನ್ನು ಶೌಚಾಲಯ, ಡೇ ಕೇರ್‌ ಸೆಂಟರ್‌‌, ಹಾಲುಣಿಸುವ ಮಹಿಳೆಯರ ಕೇಂದ್ರಗಳಾಗಿ ಪರಿವರ್ತನೆ ಮಾಡಲಾಗುವುದು” ಎಂದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago