Featured

ತೊಕ್ಕೊಟ್ಟು:ರಾಸಾಯನಿಕ ಸಾಗಿಸುತ್ತಿದ್ದ  ಟ್ಯಾಂಕರ್ ಪಲ್ಟಿ – Vishwanews24

ತೊಕ್ಕೊಟ್ಟು:ರಾಸಾಯನಿಕ ಸಾಗಿಸುತ್ತಿದ್ದ  ಟ್ಯಾಂಕರ್ ಪಲ್ಟಿ

ಮಂಗಳೂರು: ರಾಸಾಯನಿಕ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಈ ಲಾರಿ ಕೇರಳದ ಕೊಚ್ಚಿಯಿಂದ ಬೈಕಂಪಾಡಿಯಲ್ಲಿರುವ ಪೇಂಟ್ ತಯಾರಿಸುವ ಕೈಗಾರಿಕೆಗೆ ರಾಸಾಯನಿಕ ಸಾಗಿಸುತ್ತಿದ್ದು ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅನಿಲ ಹೊಂದಿದ್ದ ಟ್ಯಾಂಕರ್ ತೆರವು ತಡರಾತ್ರಿ 1 ಗಂಟೆಯವರೆಗೆ ನಡೆಯಿತು. ಅಗ್ನಿ ಶಾಮಕ ದಳ, ಎಸಿಪಿ ಧನ್ಯಾ ಎನ್. ನಾಯಕ್, ದಕ್ಷಿಣ ಸಂಚಾರ ಠಾಣೆಯ ರಮೇಶ್ ಹಾನಾಪುರ್, ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಸ್ಥಳದಲ್ಲಿ ಹಾಜರಿದ್ದು ತೆರವು ಕಾರ್ಯಾಚರಣೆಗೆ ಮಾರ್ಗದರ್ಶನ ಮಾಡಿದರು‌. ನಡು ರಸ್ತೆಯಲ್ಲೇ ಉರುಳಿದ್ದ ಟ್ಯಾಂಕರಿನಿಂದ ಸಣ್ಣ ಪ್ರಮಾಣದಲ್ಲಿ ರಾಸಾಯನಿಕ ಸೋರಿಕೆ ಉಂಟಾಗಿ ಪರಿಸರವಿಡೀ ದುರ್ವಾಸನೆ ಬೀರುತಿತ್ತು. ಸ್ಥಳಕ್ಕಾಗಮಿಸಿದ ಬೈಕಂಪಾಡಿ ಬಿಎಎಸ್ ಎಫ್ ಸುರಕ್ಷಾ ತಂಡ ಸಮೀಪದ ವಾಣಿಜ್ಯ ಮಳಿಗೆಗಳ ವಿದ್ಯುತ್ ದೀಪಗಳನ್ನು ಆರಿಸಲು ಸೂಚನೆ ನೀಡಿತು. ರಾ.ಹೆ.66 ರ ಎರಡೂ ಕಡೆಗಳಲ್ಲಿ ವಾಹನಗಳು ಸಂಚರಿಸದಂತೆ ಸಂಚಾರ ಠಾಣಾ ಪೊಲೀಸರು ತಡೆಹಿಡಿದಿದ್ದರು. ಬಿಎಎಸ್ ಎಫ್ ನಿಂದ ಬಂದ ಬೃಹತ್ ಗಾತ್ರದ ಕ್ರೇನ್ ಸಹಿತ ಎರಡು ಸಣ್ಣ ಕ್ರೇನ್ ಗಳನ್ನು ಬಳಸಿಕೊಂಡು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಯಿತು. ಮೊದಲಿಗೆ ಲಾರಿಯನ್ನು ಮೇಲಕ್ಕೆತ್ತಿ, ನಂತರ ಟ್ಯಾಂಕ್ ಅನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ, ಇನ್ನೊಂದು ಲಾರಿಗೆ ಲೋಡ್ ಮಾಡಿ ತಕ್ಷಣ ಕಳುಹಿಸಲಾಯಿತು. ರಾಸಾಯನಿಕ ಹೊಂದಿರುವ ಟ್ಯಾಂಕ್ ಹಲವು ಪದರಗಳು ಹಾಗೂ ಸುತ್ತಲೂ ಕಬ್ಬಿಣದ ಸುರಕ್ಷಾ ಕವಚ ಇರುವುದರಿಂದ ಸಣ್ಣ ಪ್ರಮಾಣದಲ್ಲಿ ಸೋರಿಕೆ ಉಂಟಾಗಿದೆ. ಸಾಬೂನಿಗೆ ಹಾಕುವ ರಾಸಾಯನಿಕ ಆಗಿರುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಬಿಎಎಸ್ ಎಫ್ ಸುರಕ್ಷತಾ ಅಧಿಕಾರಿ ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

16 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

17 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

17 hours ago