ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿ ಆಗಿರುವುದನ್ನು ಗುರುತಿಸಲಾಗಿದೆ. ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನುವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ:
ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವ ಯಾರಾದರೂ ಬಿಎನ್ಎಸ್ (ಅಪರಾಧಿಗೆ ಆಶ್ರಯ ನೀಡುವ) ಸೆಕ್ಷನ್ 249(ಎ) ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಪೊಲೀಸ್ ಕಮಿಷನರ್ ಎಚ್ಚರಿಸಿದ್ದಾರೆ.
ರೌಡಿ ಶೀಟರ್ ಆಗಿದ್ದ ತಲಪಾಡಿ ಅಜ್ಜಿನಡ್ಕದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂಬಾತನನ್ನು ರಾಷ್ಟ್ರೀಯ ಹೆದ್ದಾರಿ 66 ತೊಕ್ಕೊಟ್ಟಿನ ಫ್ಲೈಓವರ್ ನಲ್ಲಿ ಶುಕ್ರವಾರ ಮುಂಜಾನೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯಲಾಗಿದೆ.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…