Featured

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ

ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿ ಆಗಿರುವುದನ್ನು ಗುರುತಿಸಲಾಗಿದೆ. ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನುವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ:

ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವ ಯಾರಾದರೂ ಬಿಎನ್ಎಸ್ (ಅಪರಾಧಿಗೆ ಆಶ್ರಯ ನೀಡುವ) ಸೆಕ್ಷನ್ 249(ಎ) ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಪೊಲೀಸ್ ಕಮಿಷನರ್ ಎಚ್ಚರಿಸಿದ್ದಾರೆ.

ರೌಡಿ ಶೀಟರ್ ಆಗಿದ್ದ ತಲಪಾಡಿ ಅಜ್ಜಿನಡ್ಕದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂಬಾತನನ್ನು ರಾಷ್ಟ್ರೀಯ ಹೆದ್ದಾರಿ 66 ತೊಕ್ಕೊಟ್ಟಿನ ಫ್ಲೈಓವರ್ ನಲ್ಲಿ ಶುಕ್ರವಾರ ಮುಂಜಾನೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯಲಾಗಿದೆ.

ಇದನ್ನೂ ಓದಿ:

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

7 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

7 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

8 hours ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

8 hours ago