Featured

ತೊಕ್ಕೊಟ್ಟು : ಮೊಸರು ಕುಡಿಕೆ ಮೆರವಣಿಗೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ಇಬ್ಬರ ಬಂಧನ – vishwanews24

ತೊಕ್ಕೊಟ್ಟು : ಮೊಸರು ಕುಡಿಕೆ ಮೆರವಣಿಗೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ಇಬ್ಬರ ಬಂಧನ
ಉಳ್ಳಾಲ: ತೊಕ್ಕೊಟ್ಟಿನಲ್ಲಿ ಶನಿವಾರ ನಡೆದಿದ್ದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಕೈ ಸನ್ನೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು.

ತೊಕ್ಕೊಟ್ಟುವಿನ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಯುವಕರ ತಂಡವೊಂದು ಶನಿವಾರ ರಾತ್ರಿ 11.50ರ ವೇಳೆಗೆ ತೊಕ್ಕೊಟ್ಟು ಒಳಪೇಟೆ ಬಳಿ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ಜೋರಾಗಿ ಬ್ಯಾಂಡ್ ಬಾರಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರೆನ್ನಲಾಗಿದೆ. ಈ ವೇಳೆ ಉಳ್ಳಾಲ ಠಾಣೆಯ ಮಹಿಳಾ ಸಿಬ್ಬಂದಿ ಪೂರ್ಣಿಮಾ ಮತ್ತು ಲಕ್ಷ್ಮೀ ಎಂಬವರು ಯುವಕರಲ್ಲಿ ಮುಂದಕ್ಕೆ‌ ಹೋಗುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಆರೋಪಿ ದೀಪಕ್ ಎಂಬಾತನು ಮುಂದಕ್ಕೆ ಹೋಗದೆ ಮೆರವಣಿಗೆಯನ್ನ ತಡೆದು ನಿಲ್ಲಿಸಿ ಪೂರ್ಣಿಮಾರಿಗೆ ತನ್ನ ಕೈಬೆರಳುಗಳಲ್ಲಿ ಅಶ್ಲೀಲ ಸನ್ನೆ ಮಾಡಿ ನಿಂದಿಸಿದ್ದಾನೆಂದು ಆರೋಪಿಸಲಾಗಿದೆ.

ಮತ್ತೋರ್ವ ಆರೋಪಿ ಕಿರಣ್ ಎಂಬಾತ ಪೂರ್ಣಿಮಾ ಅವರನ್ನು  ತಳ್ಳಿದ್ದು , ಮೈಗೆ ಕೈ ಹಾಕಿ ಮಾನಭಂಗ ಮಾಡಿರುವುದಾಗಿ ಪೂರ್ಣಿಮಾ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಗಳಾದ ದೀಪಕ್ ಮತ್ತು ಕಿರಣ್ ಅವರನ್ನ ಬಂಧಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

1 hour ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

3 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago