Featured

ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ಅಂಕಿತ; ಸದ್ಯದಲ್ಲೇ ಕಾಯ್ದೆ ಜಾರಿ -Vishwanews24

 ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಯಾದ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಸದ್ಯದಲ್ಲಿಯೇ ಅದು ಕಾನೂನು ಆಗಿ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

ಮುಸ್ಲಿಂ ಧರ್ಮದ ವೈಯಕ್ತಿಕ ಕಾನೂನಿನಲ್ಲಿ ತ್ರಿವಳಿ ತಲಾಖ್​ ಪದ್ಧತಿಗೆ ಸಮ್ಮತಿ ಇತ್ತು. ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ಕೊಡಬಹುದಾಗಿತ್ತು.

ಇಸ್ಲಾಮ್ ನ ಮೂಲ ಕಾನೂನಿನಲ್ಲಿ ತ್ರಿವಳಿ ತಲಾಖ್ ಗೆ ಬೇರೆಯೇ ವಿಧಿವಿಧಾನಗಳು ಇವೆ. ಆದರೂ ಈಗೀಗ ಈ ಕಾನೂನು ದುರ್ಬಳಕೆಯಾಗಿ ಇನ್ಸ್ ​ಟಂಟ್ ತಲಾಖ್ (ತತ್ ಕ್ಷಣವೇ ನೀಡುವ ವಿಚ್ಛೇದನ) ಆಗಿಬಿಟ್ಟಿದೆ. ಮುಸ್ಲಿಂ ಪುರುಷರು ಇದನ್ನು ದುರ್ಬಳಕೆ ಮಾಡುವುದರಿಂದ ಮದುವೆಯಾದ ಮುಸ್ಲಿಂ ಮಹಿಳೆಯರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿತ್ತು.

ಇದನ್ನು ಮನಗಂಡ ಕೇಂದ್ರ ಸರ್ಕಾರ ಈ ಸಾಮಾಜಿಕ ಪಿಡುಗನ್ನು ಹೊಡೆದೋಡಿಸಲು ತ್ರಿವಳಿ ತಲಾಖ್ ಮಸೂದೆಯನ್ನು ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯಿತು. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಕೂಡ ಸಿಕ್ಕಿದ್ದು ಇನ್ನು ಮುಂದೆ ತ್ರಿವಳಿ ತಲಾಖ್ ಹೇಳಿದರೆ ಕ್ರಿಮಿನಲ್ ಅಪರಾಧವಾಗಲಿದೆ. ಲೋಕಸಭೆಯಲ್ಲಿ ಮುಸ್ಲಿಂ ಮಹಿಳೆಯರ (ಮದುವೆಯ ಹಕ್ಕುಗಳ ರಕ್ಷಣೆ) ಮಸೂದೆ ಕಳೆದ ವಾರ ಅನುಮೋದನೆಗೊಂಡಿತ್ತು.

ಇನ್ನು ಮುಂದೆ ಮುಸಲ್ಮಾನ ಧರ್ಮದಲ್ಲಿ ಪತ್ನಿಗೆ ತ್ರಿವಳಿ ತಲಾಖ್ ಹೇಳಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಆಗುತ್ತದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago