ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಯಾದ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಸದ್ಯದಲ್ಲಿಯೇ ಅದು ಕಾನೂನು ಆಗಿ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.
ಮುಸ್ಲಿಂ ಧರ್ಮದ ವೈಯಕ್ತಿಕ ಕಾನೂನಿನಲ್ಲಿ ತ್ರಿವಳಿ ತಲಾಖ್ ಪದ್ಧತಿಗೆ ಸಮ್ಮತಿ ಇತ್ತು. ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ಕೊಡಬಹುದಾಗಿತ್ತು.
ಇಸ್ಲಾಮ್ ನ ಮೂಲ ಕಾನೂನಿನಲ್ಲಿ ತ್ರಿವಳಿ ತಲಾಖ್ ಗೆ ಬೇರೆಯೇ ವಿಧಿವಿಧಾನಗಳು ಇವೆ. ಆದರೂ ಈಗೀಗ ಈ ಕಾನೂನು ದುರ್ಬಳಕೆಯಾಗಿ ಇನ್ಸ್ ಟಂಟ್ ತಲಾಖ್ (ತತ್ ಕ್ಷಣವೇ ನೀಡುವ ವಿಚ್ಛೇದನ) ಆಗಿಬಿಟ್ಟಿದೆ. ಮುಸ್ಲಿಂ ಪುರುಷರು ಇದನ್ನು ದುರ್ಬಳಕೆ ಮಾಡುವುದರಿಂದ ಮದುವೆಯಾದ ಮುಸ್ಲಿಂ ಮಹಿಳೆಯರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿತ್ತು.
ಇದನ್ನು ಮನಗಂಡ ಕೇಂದ್ರ ಸರ್ಕಾರ ಈ ಸಾಮಾಜಿಕ ಪಿಡುಗನ್ನು ಹೊಡೆದೋಡಿಸಲು ತ್ರಿವಳಿ ತಲಾಖ್ ಮಸೂದೆಯನ್ನು ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯಿತು. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಕೂಡ ಸಿಕ್ಕಿದ್ದು ಇನ್ನು ಮುಂದೆ ತ್ರಿವಳಿ ತಲಾಖ್ ಹೇಳಿದರೆ ಕ್ರಿಮಿನಲ್ ಅಪರಾಧವಾಗಲಿದೆ. ಲೋಕಸಭೆಯಲ್ಲಿ ಮುಸ್ಲಿಂ ಮಹಿಳೆಯರ (ಮದುವೆಯ ಹಕ್ಕುಗಳ ರಕ್ಷಣೆ) ಮಸೂದೆ ಕಳೆದ ವಾರ ಅನುಮೋದನೆಗೊಂಡಿತ್ತು.
ಇನ್ನು ಮುಂದೆ ಮುಸಲ್ಮಾನ ಧರ್ಮದಲ್ಲಿ ಪತ್ನಿಗೆ ತ್ರಿವಳಿ ತಲಾಖ್ ಹೇಳಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಆಗುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…