ನವದೆಹಲಿ: ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಗಿರುವುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದ್ದು, ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಧ್ಯಮ ಯುಗದ ಕ್ರೂರ ಪದ್ದತಿಗೆ ಇಂದು ಅಂತ್ಯಗೊಂಡಿದ್ದು, ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.
ಇಂದು ಇಡೀ ದೇಶಕ್ಕೆ ಒಂದು ಐತಿಹಾಸಿಕ ದಿನ. ಇಂದು ಲಕ್ಷಾಂತರ ಮುಸ್ಲಿಂ ತಾಯಂದಿರು ಮತ್ತು ಸಹೋದರಿಯರು ಗೆದ್ದಿದ್ದಾರೆ ಮತ್ತು ಅವರಿಗೆ ಘನತೆಯಿಂದ ಬದುಕುವ ಹಕ್ಕು ದೊರೆತಿದೆ. ಅತ್ಯಂತ ಪ್ರಾಚೀನ ಹಾಗೂ ಮಧ್ಯಯುಗದ ಸಂಸ್ಕೃತಿಯನ್ನು ಇದೀಗ ಸಂಸತ್ ಅಮಾನ್ಯಮಾಡಿದೆ.
ತ್ರಿವಳಿ ತಲಾಖ್ ನಿಷೇಧ ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗುತ್ತದೆ ಹಾಗೂ ಮಹಿಳೆಯರ ಮೇಲಿನ ಗೌರವ ಇನ್ನಷ್ಟು ಹೆಚ್ಚಾಗಲಿದೆ. ಮುಸ್ಲಿಂ ಮಹಿಳೆಯರ ವಿರುದ್ಧವಾಗಿದ್ದ ತಪ್ಪು ಸಂಸ್ಕೃತಿ ಇದೀಗ ನಾಶವಾಗಿದೆ. ಇಂತಹ ಆಚರಣೆಗಳಿಂದ ಸಮಸ್ಯೆಗೆ ಎದುರಾಗಿ, ಜೀವನದಲ್ಲಿ ಹೋರಾಟದ ಹಾದಿ ತುಳಿದ ಮಹಿಳೆಯರಿಗೆ ನನ್ನ ಗೌರವ ಸಮರ್ಪಿಸುತ್ತೇನೆ ಎಂದಿದ್ದಾರೆ.
ಈ ವೇಳೆ ಮಸೂದೆಯನ್ನು ಅಂಗೀಕರಿಸುವ ನಿಟ್ಟಿನಲ್ಲಿ ಸಹಕಾರ ನೀಡಿದ ಎಲ್ಲ ಸಂಸದರಿಗೆ ನನ್ನ ವಂದನೆಗಳನ್ನು ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…