ಮಂಗಳೂರು: ಮೀನುಗಾರಿಕೆಗೆ ತೆರಳಿ ಬೋಟ್ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರರೊಬ್ಬರನ್ನು ಕರಾವಳಿ ತಟ ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ. ಒಡಿಶಾ ಮೂಲದ ಮೀನುಗಾರ ಲೋಂಡ (35) ರಕ್ಷಣೆಗೊಳಗಾದ ವ್ಯಕ್ತಿ.
ಲೋಂಡ, ಮಂಗಳೂರು ತಂಡದೊಂದಿಗೆ 23ರಂದು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಆತ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾರೆ. ಆತ ಬಿದ್ದಿರುವುದು ಇತರ ಮೀನುಗಾರರಿಗೆ ಕೆಲ ಸಮಯದ ನಂತರ ಗೊತ್ತಾಗಿದೆ. ಆತನ ಮೊಬೈಲ್ ಬೋಟ್‌ನಲ್ಲೇ ಇದ್ದುದರಿಂದ ಕೂಡಲೇ ಇತರ ಮೀನುಗಾರರು ಕರಾವಳಿ ಕಾವಲು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಚರಣೆ ಮಾಡಿ, ನಾಪತ್ತೆಯಾದ ಮೀನುಗಾರನನ್ನು ಮಲ್ಪೆ ಲೈಟ್ ಹೌಸ್‌ನಿಂದ 10 ನಾಟಿ ಕಲ್ ಮೈಲು ದೂರದಲ್ಲಿ ರಕ್ಷಣಾ ತಂಡ ರಕ್ಷಿಸಿದ್ದಾರೆ.
ಇನ್ನು ಲೊಂಡ ಥರ್ಮೊಕೋಲ್ ತುಂಡಿನ ಸಹಾಯದಿಂದ ಸತತ 12 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ, ಪ್ರಾಣ ಉಳಿಸಿಕೊಳ್ಳಲು ಪರದಾಟ ನಡೆಸಿದ್ದಾರೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…