ಪಣಜಿ: ನೈಟ್ಕ್ಲಬ್ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್ ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ.
ಇತ್ತೀಚೆಗೆ ಕ್ಲಬ್ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದ್ದರು.
ನೈಟ್ಕ್ಲಬ್ನಲ್ಲಿ ಸಂಭವಿಸಿದ ಭೀಕರ ಬೆಂಕಿಯ ನಂತರ ದೇಶದಿಂದ ಪಲಾಯನ ಮಾಡಿದ ಲೂತ್ರಾ ಸಹೋದರರ ಒಡೆತನದ ಗೋವಾದ ವಾಗೇಟರ್ ಪ್ರದೇಶದಲ್ಲಿರುವ ರೋಮಿಯೋ ಲೇನ್ ರೆಸ್ಟೋರೆಂಟ್ ಅನ್ನು ಕೆಡವಲಾಯಿತು. ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ಇದರ ಮಾಲೀಕರು.
ರೋಮಿಯೋ ಲೇನ್ ಬಳಿ ಇರುವ ಅವರ ಬಿರ್ಚ್ ಬೈ ರೋಮಿಯೋ ಲೇನ್ ನೈಟ್ಕ್ಲಬ್ ಡಿಸೆಂಬರ್ 7 ರಂದು ಬೆಂಕಿಗೆ ಆಹುತಿಯಾಗಿ 25 ಜನರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕ್ಲಬ್ನ ಮಾಲೀಕರನ್ನು ಥೈಲ್ಯಾಂಡ್ನಲ್ಲಿ ಬಂಧಿಸಲಾಗಿದೆ.
ಶೀಘ್ರದಲ್ಲೇ ಭಾರತಕ್ಕೆ ಕರೆತರುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಕ್ಲಬ್ನ ನಾಲ್ವರು ಮಾಲೀಕರ ಪೈಕಿ ಅಜಯ್ ಗುಪ್ತಾನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…