ಕಾಪು, ಮಾ. ೧೪ : ದಂಡತೀರ್ಥ ಪದವಿ ಪೂರ್ವ ಕಾಲೇಜಿಗೆ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಡ ಮಾಡಿದ ಕಂಪ್ಯೂಟರ್ ಸಹಿತ ಕಂಪ್ಯೂಟರ್ ಲ್ಯಾಬ್ ಅನ್ನು ಸೋಮವಾರ ಉದ್ಘಾಟಿಸಲಾಯಿತು.
ಕಂಪ್ಯೂಟರ್ ಲ್ಯಾಬ್‌ನ್ನು ಉದ್ಘಾಟಿಸಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರ ಉಡುಪಿ ರೀಜನಲ್ ಕಛೇರಿಯ ಡೆಪ್ಯುಟಿ ಜನರಲ್ ಮೆನೇಜರ್ ಡಾ| ಎಚ್.ಟಿ. ವಾಸಪ್ಪ ಮಾತನಾಡಿ, ಗ್ರಾಹಕರ ಸಹಾಯದಿಂದ ಯೂನಿಯನ್ ಬ್ಯಾಂಕ್ ಉನ್ನತ ಮಟ್ಟವನ್ನು ಏರುವಂತಾಗಿದೆ. ಬ್ಯಾಂಕ್ ತನ್ನ ಸಿಎಸ್‌ಆರ್ ನಿಽಯನ್ನು ಬಳಸಿಕೊಂಡು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಬಹಳಷ್ಟು ಕೊಡುಗೆ, ಸೇವೆಗಳನ್ನು ಒದಗಿಸುತ್ತಿದೆ. ಕೊರೊನಾ ಸಂಕಷ್ಟದ ವೇಳೆ ಜಿಲ್ಲಾಡಳಿತದ ಮನವಿಯಂತೆ ಉಡುಪಿ ಜಿಲ್ಲಾಸ್ಪತ್ರೆಗೆ ೪೨ ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಫ್ಲಾಂಟ್‌ನ್ನು ನೀಡಿ ಸಹಕರಿಸಿದ್ದು, ಶಿಕ್ಷಣ ಕೇಂದ್ರಗಳು, ಆಸ್ಪತ್ರೆಗಳು, ಪಶು ವೈದ್ಯಕೀಯ ಆಸ್ಪತ್ರೆಯೂ ಸೇರಿದಂತೆ ವಿವಿಧ ಸೇವಾ ಕ್ಷೇತ್ರಗಳ ಅಭಿವೃದ್ಧಿಗಾಗಿ ನಿರಂತರ ಕೊಡುಗೆಗಳನ್ನು ನೀಡುತ್ತಾ ಬರುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಡಾ| ಕೆ. ಪ್ರಶಾಂತ್ ಶೆಟ್ಟಿ ಮಾತನಾಡಿ, ದಂಡತೀಥ ಕನ್ನಡ ಮಾದ್ಯಮ ಪ್ರಾಥಮಿಕ ಶಾಲೆಯಿಂದ ಆರಂಭಗೊಂಡ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ಸೇವೆಯು ಇಂದು ವಿಸ್ತಾರವಾಗಿ ಬೆಳೆದಿದ್ದು, ಸಾವಿರಾರು ಮಂದಿ ಇಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಈ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಂಪ್ಯೂಟರ್ ಲ್ಯಾಬ್‌ನ್ನು ತೆರೆಯಲಾಗಿದ್ದು, ಇದಕ್ಕಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ಕೊಡುಗೆ ಸ್ಮರಣೀಯವಾಗಿದೆ ಎಂದರು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉಡುಪಿ ರೀಜನಲ್ ಕಛೇರಿಯ ಅಸಿಸ್ಟೆಂಟ್ ಜನರಲ್ ಮೆನೇಜರ್ ರೊಸಾಲಿನ್ ರೋಡ್ರಿಗಸ್, ಮಾರುಕಟ್ಟೆ ಪ್ರಬಂಧಕ ಮಂಜುನಾಥ್, ಕಾಪು ಶಾಖಾ ಹಿರಿಯ ಪ್ರಬಂಧಕ ಜೋಯಲ್ ಫ್ರಾನ್ಸಿಸ್ ಮೆನೇಜಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವರ್ಷಾ ಪ್ರಭು ಸ್ವಾಗತಿಸಿದರು. ಆಡಳಿತಾಽಕಾರಿ ಅಲ್ಬನ್ ರೋಡ್ರಿಗಸ್ ಪ್ರಸ್ತಾವನೆಗೈದರು. ಕಂಪ್ಯೂಟರ್ ಶಿಕ್ಷಕಿ ಮನೀಷಾ ವಂದಿಸಿದರು. ಉಪನ್ಯಾಸಕ ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…