Featured

ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ… Vishwanews24

ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ…

ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿಯಾಗಿದೆ.

ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಭಯೋತ್ಪಾದಕ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ, ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಕಾರ್ಯ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿನ ಫುಲ್ವಾರಿ ಶರೀಫ್ ಪ್ರಕರಣಗಳೂ ಸೇರಿದಂತೆ ದೇಶದಲ್ಲಿ ಕೋಮು ಗಮಭೆ ಸೃಷ್ಠಿಸಲು ಯತ್ನಿಸಿದ ಆರೋಪಗಳೆಲ್ಲವೂ ಸೇರಿ ವಿವಿಧ ಪ್ರಕರಣಗಳ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನಿಖೆ ಪ್ರಗತಿಯಲ್ಲಿದೆ.

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ ಹಲವು ಕಡೆಗಳಲ್ಲಿ ಸಾಕಷ್ಟು ಮನೆ, ಕಚೇರಿಗಳು, ಒಂದು ಆಸ್ಪತ್ರೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

5 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

10 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago