ಬೆಂಗಳೂರು: “ದಕ್ಷಿಣ ಭಾರತಕ್ಕೆ ಕರ್ನಾಟಕ ಬಿಜೆಪಿಯ ಹೆಬ್ಬಾಗಿಲು. ಕೇರಳವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ ಕೇಸರಿ ಪಕ್ಷ ಭಿನ್ನವಾಗಿ ಕೆಲಸ ಮಾಡಬೇಕಾದ ಪರಿಣಾಮ ಬೀರಿದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿಯ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ದಕ್ಷಿಣವು ಬಿಜೆಪಿಗೆ ಭರವಸೆಯಾಗಿದೆ. ಕರ್ನಾಟಕ ಒಂದು ಹೆಬ್ಬಾಗಿಲು. ತಮಿಳುನಾಡು ಚುನಾವಣೆಯಲ್ಲಿ ಸೋತರೂ ಕೂಡಾ ಪ್ರಭಾವ ಬೀರಿದ್ದೇವೆ. ರಾಜಕೀಯ ಹಿನ್ನಡೆ ಇರುವ ರಾಜ್ಯ ಎಂದರೆ ಅದು ಕೇರಳ. ನಾವು ಕಷ್ಟಪಟ್ಟು ಕೆಲಸ ಮಾಡಿದ್ದು, ವಿಭಿನ್ನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.
“ಕಳೆದ 30 ವರ್ಷಗಳಿಂದ ದಕ್ಷಿಣದಲ್ಲಿ ಕೇಸರಿ ಬಣ್ಣವನ್ನು ಹರಡಲು ಬಿಜೆಪಿಯ ನಾಯಕರು ಶ್ರಮಿಸಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಆಕಸ್ಮಿಕವಾಗಿ ಬಂದಿಲ್ಲ. ವಿವಿಧ ರಂಗಗಳಲ್ಲಿ ಹಲವು ವರ್ಷಗಳಿಂದ ಕಠಿಣ ಶ್ರಮಪಟ್ಟ ಕಾರಣ ಬಂದಿದೆ” ಎಂದು ಹೇಳಿದ್ದಾರೆ.
“ಕರ್ನಾಟಕದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಅವರಂತಹ ಹಲವಾರು ನಾಯಕರು ಶ್ರಮಿಸಿದ್ದಾರೆ. ತಮಿಳುನಾಡು ಹಾಗೂ ಕೇರಳದಲ್ಲಿ ಬಿಜೆಪಿ ನಾಯಕರು ಚುನಾವಣಾ ಫಲಿತಾಂಶವನ್ನು ಲೆಕ್ಕಿಸದೇ ಶ್ರಮಿಸಿದ್ದಾರೆ. ಬದಲಾವಣೆಯ ಸಮಯ ಬಂದಾಗ ಬಿಜೆಪಿ ಆಯ್ಕೆಯಾಗುವುದು ಖಚಿತ” ಎಂದಿದ್ದಾರೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…