ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ – Vishwanews24
ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ
ಬೆಂಗಳೂರು: ರಾಜ್ಯದಲ್ಲಿ ಮತದಾನಕ್ಕೆ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿದೆ.
ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% ಮತದಾನ ದಾಖಲಾಗಿದೆ.
ರಾಜ್ಯದ ಕೆಲವೆಡೆ ಎವಿಎಂ ದೋಷದಿಂದಾಗಿ ಕೆಲ ಸಮಸ್ಯೆಯಾಗಿತ್ತು. ನಂತರ ಇವಿಎಂ ದೋಷವನ್ನು ಸರಿಪಡಿಸಿದ್ದು ಈಗ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಬೆಂಗಳೂರಿನ ಕೆಲವೊಂದು ಕಡೆ ಇವಿಎಂನಲ್ಲಿ (EVM) ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಮತದಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಲ್ಲಾ ಕಡೆ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಶುರುವಾಗಿದೆ. ಮತದಾನ ಹೆಚ್ಚಾಗಲು ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
