Featured

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  – Vishwanews24

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ

ಬೆಂಗಳೂರು: ರಾಜ್ಯದಲ್ಲಿ ಮತದಾನಕ್ಕೆ  ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿದೆ.

ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% ಮತದಾನ ದಾಖಲಾಗಿದೆ.

ರಾಜ್ಯದ ಕೆಲವೆಡೆ ಎವಿಎಂ ದೋಷದಿಂದಾಗಿ ಕೆಲ ಸಮಸ್ಯೆಯಾಗಿತ್ತು. ನಂತರ ಇವಿಎಂ ದೋಷವನ್ನು ಸರಿಪಡಿಸಿದ್ದು ಈಗ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಬೆಂಗಳೂರಿನ ಕೆಲವೊಂದು ಕಡೆ ಇವಿಎಂನಲ್ಲಿ (EVM) ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ಹೇಳಿದ್ದಾರೆ.

ಮತದಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಲ್ಲಾ ಕಡೆ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಶುರುವಾಗಿದೆ. ಮತದಾನ ಹೆಚ್ಚಾಗಲು ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago