Featured

ದಕ್ಷಿಣ ಕನ್ನಡದಲ್ಲಿ ಭಾರತ್ ಬಂದ್ ಗೆ ಬೆಂಬಲ ನೀಡದ ಖಾಸಗಿ ಬಸ್ ಮಾಲೀಕರು..

ಮಂಗಳೂರು, : ನಾಳೆ ಜನವರಿ 8 ಮತ್ತು 9 ರಂದು ಕರೆ ನೀಡಲಾಗಿರುವ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ, ಅಸಂಘಟಿತ ಸಾರಿಗೆ ಕಾರ್ಮಿಕರ ಸಂಘಟನೆ ಈಗಾಗಲೇ ಬೆಂಬಲ ಸೂಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಮಾಲೀಕರು ಬೆಂಬಲ ನೀಡದಿರಲು ತೀರ್ಮಾನಿಸಿದ್ದಾರೆ.

ಈ ಕುರಿತು ಖಾಸಗಿ ಬಸ್ ಮಾಲೀಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮತ್ತು ನಾಡಿದ್ದು ಮಂಗಳೂರು ಸೇರಿದಂತೆ ಜಿಲ್ಲೆಯ ಇತರೆಡೆ ಎಂದಿನಂತೆ ಖಾಸಗಿ ಬಸ್ ಸಂಚಾರ ಇರಲಿದೆ.

ಮೋಟರ್ ಟ್ರಾನ್ಸ್ ಪೋರ್ಟ್ ಆಂಡ್ ಎಂಜಿನಿಯರಿಂಗ್ ವರ್ಕರ್ಸ್ ಯೂನಿಯನ್ ಬೆಂಬಲಿತ ಕಾರ್ಮಿಕ ಸಂಘಟನೆ, ದಕ್ಷಿಣ ಕನ್ನಡ ಜಿಲ್ಲಾ ಡಿ ವೈ ಎಫ್ ಐ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘ ( ಹಸಿರು ಸೇನೆ), ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ( ಜೆ ಸಿ ಟಿ ಯು) , ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪಿಂಚಣಿದಾರರ ಸಂಘ, ಅಖಿಲ ಭಾರತ ಬೀಡಿ ಫೆಡರೇಶನ್ (ಸಿ ಐ ಟಿ ಯು ) ಸೇರಿದಂತೆ ವಿವಿಧ ಸಂಘಟನೆಗಳು ನಾಳಿನ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

5 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago