ಮಂಗಳೂರು, : ನಾಳೆ ಜನವರಿ 8 ಮತ್ತು 9 ರಂದು ಕರೆ ನೀಡಲಾಗಿರುವ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ, ಅಸಂಘಟಿತ ಸಾರಿಗೆ ಕಾರ್ಮಿಕರ ಸಂಘಟನೆ ಈಗಾಗಲೇ ಬೆಂಬಲ ಸೂಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಮಾಲೀಕರು ಬೆಂಬಲ ನೀಡದಿರಲು ತೀರ್ಮಾನಿಸಿದ್ದಾರೆ.
ಈ ಕುರಿತು ಖಾಸಗಿ ಬಸ್ ಮಾಲೀಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮತ್ತು ನಾಡಿದ್ದು ಮಂಗಳೂರು ಸೇರಿದಂತೆ ಜಿಲ್ಲೆಯ ಇತರೆಡೆ ಎಂದಿನಂತೆ ಖಾಸಗಿ ಬಸ್ ಸಂಚಾರ ಇರಲಿದೆ.
ಮೋಟರ್ ಟ್ರಾನ್ಸ್ ಪೋರ್ಟ್ ಆಂಡ್ ಎಂಜಿನಿಯರಿಂಗ್ ವರ್ಕರ್ಸ್ ಯೂನಿಯನ್ ಬೆಂಬಲಿತ ಕಾರ್ಮಿಕ ಸಂಘಟನೆ, ದಕ್ಷಿಣ ಕನ್ನಡ ಜಿಲ್ಲಾ ಡಿ ವೈ ಎಫ್ ಐ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘ ( ಹಸಿರು ಸೇನೆ), ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ( ಜೆ ಸಿ ಟಿ ಯು) , ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪಿಂಚಣಿದಾರರ ಸಂಘ, ಅಖಿಲ ಭಾರತ ಬೀಡಿ ಫೆಡರೇಶನ್ (ಸಿ ಐ ಟಿ ಯು ) ಸೇರಿದಂತೆ ವಿವಿಧ ಸಂಘಟನೆಗಳು ನಾಳಿನ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…