ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. ಜೂನ್ 16 ರಿಂದ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ ಎಂದು ಹೇಳಿದೆ.
ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…