ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನಕ್ಕಾಗುವಾಗ ಜನರು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಮಧ್ಯಾಹ್ನ ವೇಳೆ ಸುಮಾರು 38 ಡಿ.ಸೆ.ಗೂ ಅಧಿಕ ತಾಪಮಾನ ದಾಖಲಾಗುತ್ತಿದೆ.
ಕೆಲವು ಕಡೆ ಮಳೆ ಬಂದರೂ ತಾಪಮಾನದಲ್ಲಿ ಇಳಿಕೆ ಕಾಣುತ್ತಿಲ್ಲ. ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮೋಡದ ಜತೆಗೆ ಬಿಸಿಲಿನ ಬೇಗೆ ಹೆಚ್ಚುತ್ತಿದೆ. ಈ ನಡುವೆ ಜನರು ಕುಸಿದು ಬೀಳುತ್ತಿರುವ, ಮಲಗಿದ್ದಲ್ಲೇ ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಎ.22ರಂದು ಕಾರ್ಕಳದ ಕುಕ್ಕುಂದೂರಿನ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದರು. ಎ. 21ರಂದು ಕೆಲಸ ಮುಗಿಸಿ ಮಲಗಿದ್ದ ಕಾರ್ಕಳದ ಕಾರ್ಮಿಕರೊಬ್ಬರು ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಎ.21ರಂದು ಬೆಂಗಳೂರಿನಿಂದ ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ಮಧ್ಯಾಹ್ನ ಮಲಗಿದ್ದ ಕೋಣೆಯಲ್ಲಿ ಮೃತಪಟ್ಟಿದ್ದರು.
ಇದನ್ನೂ ಓದಿ:
ಎ.10ರಂದು ಕದ್ರಿಯ ಹೊಟೇಲ್ ಕಾರ್ಮಿಕ ಮಧ್ಯಾಹ್ನ ವಿಶ್ರಾಂತಿ ಪಡೆಯಲು ಮಲಗಿದ್ದವರು ಅಲ್ಲೇ ಮೃತಪಟ್ಟಿದ್ದರು. ಎ.13ರಂದು ಮಣಿಪಾಲದ ಲಾಡ್ಜ್ ನಲ್ಲಿ ತಂಗಿದ್ದ ದಾವಣಗೆರೆ ಮೂಲದ ವ್ಯಕ್ತಿಯೊಬ್ಬರು ಮಲಗಿದ್ದಲ್ಲೇ ಸಾವನ್ನಪ್ಪಿದ ಬಗ್ಗೆ ವರದಿಯಾಗಿತ್ತು. ತೀರಾ ಇತ್ತೀಚೆಗೆ ಉಜಿರೆಯಲ್ಲೂ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದರು. ಈ ಎಲ್ಲ ಘಟನೆಗಳು ಬಿಸಿಲಾಘಾತದಿಂದಲೇ ನಡೆದಿದೆ ಎಂದು ಇನ್ನೂ ಖಚಿತಗೊಂಡಿಲ್ಲ. ಆದರೂ ಇದು ಕೂಡ ಒಂದು ಕಾರಣ ಎಂದು ಅಂದಾಜಿಸಲಾಗಿದೆ. ಬಿಸಿಲಿನ ಆಘಾತದಿಂದ ಕಾಸರಗೋಡು ರಾಜಪುರಂ ಕೋಳಿಚ್ಚಾಲ್‌ನ 48 ವರ್ಷದ ವ್ಯಕ್ತಿ, ಕುಂಬಳೆಯ ರಿಕ್ಷಾ ಚಾಲಕ ಸಹಿತ ಕೇರಳ ರಾಜ್ಯದ 20 ಕ್ಕೂ ಅಧಿಕ ಮಂದಿಗೆ ಬಿಸಿಲಿನ ಸುಟ್ಟ ಗಾಯಗಳಾಗಿವೆ. ಕುಂಬಳೆಯ ರಿಕ್ಷಾ ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…