Featured

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ – vishwanews24

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ

ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನಕ್ಕಾಗುವಾಗ ಜನರು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಮಧ್ಯಾಹ್ನ ವೇಳೆ ಸುಮಾರು 38 ಡಿ.ಸೆ.ಗೂ ಅಧಿಕ ತಾಪಮಾನ ದಾಖಲಾಗುತ್ತಿದೆ.

ಕೆಲವು ಕಡೆ ಮಳೆ ಬಂದರೂ ತಾಪಮಾನದಲ್ಲಿ ಇಳಿಕೆ ಕಾಣುತ್ತಿಲ್ಲ. ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮೋಡದ ಜತೆಗೆ ಬಿಸಿಲಿನ ಬೇಗೆ ಹೆಚ್ಚುತ್ತಿದೆ. ಈ ನಡುವೆ ಜನರು ಕುಸಿದು ಬೀಳುತ್ತಿರುವ, ಮಲಗಿದ್ದಲ್ಲೇ ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಎ.22ರಂದು ಕಾರ್ಕಳದ ಕುಕ್ಕುಂದೂರಿನ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದರು. ಎ. 21ರಂದು ಕೆಲಸ ಮುಗಿಸಿ ಮಲಗಿದ್ದ ಕಾರ್ಕಳದ ಕಾರ್ಮಿಕರೊಬ್ಬರು ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಎ.21ರಂದು ಬೆಂಗಳೂರಿನಿಂದ ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ಮಧ್ಯಾಹ್ನ ಮಲಗಿದ್ದ ಕೋಣೆಯಲ್ಲಿ ಮೃತಪಟ್ಟಿದ್ದರು.

ಇದನ್ನೂ ಓದಿ:

ಎ.10ರಂದು ಕದ್ರಿಯ ಹೊಟೇಲ್‌ ಕಾರ್ಮಿಕ ಮಧ್ಯಾಹ್ನ ವಿಶ್ರಾಂತಿ ಪಡೆಯಲು ಮಲಗಿದ್ದವರು ಅಲ್ಲೇ ಮೃತಪಟ್ಟಿದ್ದರು. ಎ.13ರಂದು ಮಣಿಪಾಲದ ಲಾಡ್ಜ್ ನಲ್ಲಿ ತಂಗಿದ್ದ ದಾವಣಗೆರೆ ಮೂಲದ ವ್ಯಕ್ತಿಯೊಬ್ಬರು ಮಲಗಿದ್ದಲ್ಲೇ ಸಾವನ್ನಪ್ಪಿದ ಬಗ್ಗೆ ವರದಿಯಾಗಿತ್ತು. ತೀರಾ ಇತ್ತೀಚೆಗೆ ಉಜಿರೆಯಲ್ಲೂ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದರು. ಈ ಎಲ್ಲ ಘಟನೆಗಳು ಬಿಸಿಲಾಘಾತದಿಂದಲೇ ನಡೆದಿದೆ ಎಂದು ಇನ್ನೂ ಖಚಿತಗೊಂಡಿಲ್ಲ. ಆದರೂ ಇದು ಕೂಡ ಒಂದು ಕಾರಣ ಎಂದು ಅಂದಾಜಿಸಲಾಗಿದೆ. ಬಿಸಿಲಿನ ಆಘಾತದಿಂದ ಕಾಸರಗೋಡು ರಾಜಪುರಂ ಕೋಳಿಚ್ಚಾಲ್‌ನ 48 ವರ್ಷದ ವ್ಯಕ್ತಿ, ಕುಂಬಳೆಯ ರಿಕ್ಷಾ ಚಾಲಕ ಸಹಿತ ಕೇರಳ ರಾಜ್ಯದ 20 ಕ್ಕೂ ಅಧಿಕ ಮಂದಿಗೆ ಬಿಸಿಲಿನ ಸುಟ್ಟ ಗಾಯಗಳಾಗಿವೆ. ಕುಂಬಳೆಯ ರಿಕ್ಷಾ ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

17 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

17 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

17 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

22 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

22 hours ago