ಮಂಗಳೂರು\ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದೆ. ಮದೀನದಿಂದ ಮಾಹಿತಿ ಪಡೆದಿರುವ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್, ಮುಂಜಾಗ್ರತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಳ್ಳಾಲ ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದೆ. ಅಲ್ಲದೇ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು, ಸೋಮೇಶ್ವರ, ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಈ ಸಲುವಾಗಿ ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಎನ್‌ಡಿಆರ್‌ಎಫ್ ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೂ ಕೂಡಾ ತರಲಾಗಿದೆ. ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಹೇಳಿದ್ದಾರೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…