ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್ಪಿ ಯತೀಶ್ ಎನ್. ಅವರು ಅಧಿಕಾರ ಡಾ.ಅರುಣ್ ಕೆ. ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅದೇ ರೀತಿ ರೌಡಿ ಶೀಟರ್‌ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ವಹಿಸುತ್ತೇನೆ ಎಂದರು.
ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಮಾಹಿತಿಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಮುಕ್ತವಾಗಿ ತಮ್ಮ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆಗೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಡಾ.ಅರುಣ್ ಕೆ. ಮನವಿ ಮಾಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…