ಬಂಟ್ವಾಳ: ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು , ಪ್ರಜ್ಞಾವಂತ ಯುವಕರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದು ಮಿಥುನ್ ರೈ ಬಂಟ್ವಾಳ ಪೇಟೆಯಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.
ಪಕ್ಷದ ಕಾರ್ಯಕರ್ತರು ಮತದಾರರು ನನ್ನ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸಕ್ಕೆ ಯಾವುದೇ ಚ್ಯುತಿ ಬರದಂತೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತನೆ ಮಾಡಲು ನನಗೆ ಅವಕಾಶ ನೀಡಬೇಕು. ಈ ಚುನಾವಣೆ ಯಾವುದೇ ವೈಯಕ್ತಿಕ ಹೋರಾಟ ಅಲ್ಲ. ಇದು ನಮ್ಮೆಲ್ಲರ ಗೆಲುವು ಎಂದು ಭಾವಿಸಿ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ , ಮೈಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಬಿ.ಎಚ್.ಖಾದರ್ , ಚಿತ್ತರಂಜನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…