Featured

ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ – vishwanews24

ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ

ಕಾರವಾರ : ದಕ್ಷಿಣ ಕನ್ನಡ  ಜಿಲ್ಲೆಯನ್ನು ಮಂಗಳೂರು ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ  ಹೇಳಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಅವರು, ಐತಿಹಾಸಿಕ ಸ್ಥಳದ ಹೆಸರನ್ನು ಯಾರು ಕೂಡ ಬದಲಿಸಬಾರದು. ಹೊಸ ಜಿಲ್ಲೆಯನ್ನು ಮಾಡುವುದಾದರೇ ಯಾವ ಹೆಸರನ್ನಾದರೂ ಇಡಲಿ. ಕನ್ನಡ ಎಂದಿದ್ದಕ್ಕೆ ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ ಕಾಸರಗೋಡು  ಬೇರೆಯಾಗಿರುತ್ತಿರಲಿಲ್ಲ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಗಡಿ ನಾಡು ಉತ್ಸವ ಮಾಡಲಾಗುವುದು. ಕನ್ನಡ ಹೊರತು ಪಡಿಸಿ ಅನ್ಯ ಭಾಷಿಕರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದೆ. ಬೇರೆ ರಾಜ್ಯಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.

36 ಗಂಟೆಯಲ್ಲಿ ಕನ್ನಡ ಕಲಿಯುವ ಯೋಜನೆ ರೂಪಿಸಿದ್ದೇವೆ. ಈಗಾಗಲೇ ಬೆಂಗಳೂರಿನಲ್ಲಿ 22 ಕಡೆ ಕನ್ನಡ ಕಲಿಕಾ ಕೇಂದ್ರ ಆರಂಭಿಸಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಕನ್ನಡದ ಐತಿಹಾಸಿಕ ಕುರುಹು ಇವೆ. ಐತಿಹಾಸಿಕ ಸ್ಥಳಗಳ ಕುರಿತು ಸಾರ್ವಜನಿಕರಿಗೆ ತಿಳಿಯುವಂತೆ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾಗಿ ಬಹಳ ವರ್ಷ ಕಳೆದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ಮಾಡಲು ನಾವು ಆಗ್ರಹ ಮಾಡುತ್ತೇವೆ ಎಂದರು.

10ನೇ ತರಗತಿಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಫೇಲಾದವರು ಮಂಡ್ಯ, ಮೈಸೂರು ಭಾಗದವರೇ ಹೆಚ್ಚು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮನೆ ಮಾತು ಕನ್ನಡ ಇರದೆ ಇದ್ದರೂ ಕನ್ನಡ ಭಾಷೆಯಲ್ಲಿ ಮಕ್ಕಳ ಪಾಸ್ ಆಗಿರುವ ಸಂಖ್ಯೆ ಹೆಚ್ಚಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕನ್ನಡ ಲಿಪಿಯ ಫಾಂಟ್ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ‌ .ಎ.ಐ ತಂತ್ರಜ್ಞಾನದ ಅನ್ಯ ಭಾಷೆಯಿಂದ ಕನ್ನಡಕ್ಕೆ ಭಾಷಾಂತರದ ಆಪ್ ಸಹ ಅಭಿವೃದ್ಧಿ ಮಾಡಲಾಗುತಿದ್ದು ನವೆಂಬರ್‌ನಲ್ಲಿ ಬಿಡುಗಡೆ ಮಾಡುತ್ತೇವೆ. ಬ್ಯಾಂಕ್ ಸಿಬ್ಬಂದಿ ಕನ್ನಡ ಮಾತನಾಡದಿರುವುದರಿಂದ ರಾಜ್ಯದಲ್ಲಿ 6 ಎಫ್‌ಐಆರ್‌ ದಾಖಲುಮಾಡಲಾಗಿದೆ ಎಂದು ಅವರು ಹೇಳಿದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

10 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

11 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

11 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

11 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago