ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ,ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಇವರ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಬಂದು ಲಸಿಕೆ ಹಾಕಲಿರುವರು.ಹೀಗಾಗಿ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಲು ಕೋರಲಾಗಿದೆ.ನೊಂದಾವಣೆಯಾದ ಬಳಿಕ ದಿನ ನಿಗದಿಪಡಿಸಿ ಮನೆ ಮನೆಗೆ ಬಂದು ಲಸಿಕೆ ನೀಡಲಾಗುವುದು.
ಮನೆ ಮನೆ ಲಸಿಕಾ ವಾಹನಕ್ಕೆ ದಿನಾಂಕ 19-6-2021 ರಂದು ಬೆಳಿಗ್ಗೆ 9.30 ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುವುದು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…