Featured

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ -Vishwanews24

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ,ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಇವರ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಬಂದು ಲಸಿಕೆ‌ ಹಾಕಲಿರುವರು.ಹೀಗಾಗಿ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಲು ಕೋರಲಾಗಿದೆ.ನೊಂದಾವಣೆಯಾದ ಬಳಿಕ ದಿನ ನಿಗದಿಪಡಿಸಿ ಮನೆ ಮನೆಗೆ ಬಂದು ಲಸಿಕೆ‌ ನೀಡಲಾಗುವುದು.

ಮನೆ ಮನೆ ಲಸಿಕಾ‌ ವಾಹನಕ್ಕೆ ದಿನಾಂಕ 19-6-2021 ರಂದು ಬೆಳಿಗ್ಗೆ 9.30 ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುವುದು.

Vishwa News 24

Recent Posts

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

14 seconds ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

13 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

25 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

38 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

55 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

1 hour ago