ಉಡುಪಿ: ಸಂಸದ ನಳೀನ್ ಕುಮಾರ್ ಕಟೀಲ್‍ಗೆ ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಮಾಜಿ ಸಚಿವ ರಮನಾಥ್ ರೈ ವ್ಯಂಗ್ಯವಾಡಿ ಆಕ್ರೋಶ ಹೊರಹಾಕಿದರು.
ಉಡುಪಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ಸಾಧ್ಯವಾಗಿಲ್ಲ, ಇಲ್ಲಿನ ದಲಿತ ಹಿರಿಯ ಶಾಸಕರಿಗೂ ಸಚಿವ ಸ್ಥಾನ ನೀಡಿದೇ ಬಿಜೆಪಿ ಈ ಎರಡು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ 19 ಜನ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಒಬ್ಬರಿಗೂ ಸಚಿವ ಸ್ಥಾನ ನೀಡದೇ ಬಿಜೆಪಿ ಅನ್ಯಾಯ ಮಾಡಿದೆ ಎಂದು ಹೇಳಿದರು.
ಜಾಹಿರಾತು
ಮಹಾತ್ಮಾ ಗಾಂಧೀಜಿ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಕ್ಕೆ ಮೋದಿ, ಅಮಿತ್ ಶಾ ಇದನ್ನು ಸಹಿಸಲ್ಲ ಅಂತ ಅಂದು ಹೇಳಿದ್ದರು. ಆದ್ರೆ ಅಂತಹ ನಳಿನ್ ಕುಮಾರ್ ಕಟೀಲ್‍ಗೆ ಈಗ ಪ್ರಮೋಷನ್ ಆಗಿದೆ. ಮಹಾತ್ಮ ಗಾಂಧೀಜಿ ಅವರಿಗೆ ಅಪಮಾನ ಮಾಡಿದಕ್ಕೆ ಅಧ್ಯಕ್ಷಗಿರಿ ಸಿಕ್ಕಿದೆ. ಭಾರತೀಯ ಜೂಟ್ ಪಾರ್ಟಿಗೆ ಮಾತ್ರ ಇಂತಹ ಶಕ್ತಿ ಇರುವುದು ಎಂದು ವ್ಯಂಗ್ಯವಾಡಿದರು
ಜನ ನಳಿನ್ ಕುಮಾರ್ ಕಟೀಲ್ ಮುಖ ನೋಡಿ ವೋಟು ಕೊಟ್ಟಿಲ್ಲ. ಮೇಲಿನ ಮುಖ ನೋಡಿ ಮತ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮೇಲೆ ನೋಡುತ್ತಲೆ ನಿಂತಿದ್ದಾರೆ. ಇನ್ನು ಕೂಡಾ ಕೆಳಗೆ ನೋಡಿಲ್ಲ. ಆದ್ರೆ ಈಗ ಆಕಾಶ ನೋಡುವ ಪರಿಸ್ಥಿತಿ ಇಲ್ಲಿನ ಜನರಿಗಾಗಿದೆ ಎಂದರು. ನಳಿನ್ ಕುಮಾರ್ ಕಟೀಲ್ ಯಾವುದೇ ಸಾಧನೆ ಮಾಡಿದ ಚರಿತ್ರೆ ಇತಿಹಾಸ ಇಲ್ಲ ಎಂದು ಟೀಕೆ ಮಾಡಿದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…