Featured

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ :ಲಕ್ಷ್ಮಣ ಸವದಿ -Vishwanews24

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ :ಲಕ್ಷ್ಮಣ ಸವದಿ -Vishwanews24

ಮಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕಾರ್ಯಗಳು ವೇಗಪಡೆದುಕೊಂಡಿವೆ. ಬಜೆಟ್ ನಂತರ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ. ಅಲ್ಲದೆ ಸಾರಿಗೆ ನೌಕರರ ಪ್ರಮುಖ 10 ಬೇಡಿಕೆಗಳಲ್ಲಿ ಈಗಾಗಲೇ 9 ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕೊರೋನಾ ಲಾಕ್ ಡೌನ್ ಸಂದರ್ಭವೂ ಸಾರಿಗೆ ನೌಕರರ ಪೂರ್ಣ ವೇತನವನ್ನು ನೀಡಲಾಗಿತ್ತು. ಅವರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಿದೆ. ನೌಕರರ ಬಾಕಿ ಉಳಿದ ವೇತನವನ್ನು ಮೂರು -ನಾಲ್ಕು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದವರು ಹೇಳಿದರು.

ಉಡುಪಿ : ಗಾಂಧೀಜಿ ಪುಣ್ಯಸ್ಮರಣೆ – ಮಹಾತ್ಮಾ ಗಾಂಧಿಜಿಯವರ ತತ್ವಾದರ್ಶಗಳು ಮತ್ತು ನಾಯಕತ್ವ ಸಮಾಜಕ್ಕೆ ಎಂದೆಂದಿಗೂ ಪ್ರಸ್ತುತವಾಗಿದೆ : ವಿನಯ ಕುಮಾರ್ ಸೊರಕೆ -Vishwanews24

ಕೊರೋನಾ ಕಾರಣದಿಂದ ಕೆಲವು ತಿಂಗಳ ಕಾಲ ಅಭಿವೃದ್ಧಿ ಕಾರ್ಯಗಳಿಗೆ ತಡೆ ಉಂಟಾಗಿತ್ತು.ಇದೀಗ ವೇಗ ಪಡೆದುಕೊಂಡಿದೆ. ಬಜೆಟ್ ನಂತರ ಎಲ್ಲಾ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಸಚಿವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ. ಎಂಟು ಕ್ಷೇತ್ರಗಳ ಪೈಕಿ7 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಇಲ್ಲಿನ ಕಾರ್ಯಕರ್ತರು ಗೆಲ್ಲಿಸಿದ್ದಾರೆ. ಅವಿರತ ಶ್ರಮ ಮತ್ತು ಬದ್ಧತೆಯಿಂದ ಇದು ಸಾಧ್ಯವಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಇದೇ ಸಂದರ್ಭ ಅವರನ್ನು ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ದಕ್ಷಿಣ ಮಂಡಲದಿಂದ ಗೌರವಿಸಲಾಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ , ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಮತ್ತಿತರರು ಉಪಸ್ಥಿತರಿದ್ದರು.

ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ : ಸಿದ್ದರಾಮಯ್ಯ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

4 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

5 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

9 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

9 hours ago