ದಕ್ಷಿಣ ಕನ್ನಡ: ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್ಪಿ ಕಚೇರಿಯಲ್ಲೇ ಥಳಿಸಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸ : ಶಾಸಕ ಯತ್ನಾಳ್ – Vishwanews24
ದಕ್ಷಿಣ ಕನ್ನಡ: ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್ಪಿ ಕಚೇರಿಯಲ್ಲೇ ಥಳಿಸಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸ : ಶಾಸಕ ಯತ್ನಾಳ್
ದಕ್ಷಿಣ ಕನ್ನಡ: ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲ. ತಪ್ಪು ಮಾಡದೇ ಇದ್ದರೂ ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್ಪಿ ಕಚೇರಿಯಲ್ಲೇ ಥಳಿಸಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಮಾಜವೆ ತಲೆ ತಗ್ಗಿಸುವಂತೆ ಆಗಿದೆ. ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲ. ಹೀಗಿದ್ದೂ ಡಿವೈಎಸ್ಪಿ ಕೊಠಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಪೊಲೀಸರು ಥಳಿಸಿದಂತವರು ತಾಲಿಬಾನಿಗಳಲ್ಲ, ದೇಶದ್ರೋಹದ ಕೆಲಸ ಮಾಡಿದವರಲ್ಲ. ಇಂತಹ ಕೃತ್ಯ ಪೊಲೀಸ್ ಇಲಾಖೆಗೆ ಗೌರವ ತರುವ ಕೆಲಸವಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆ, ಟಿಪ್ಪಣಿ, ಹೋರಾಟ, ಸಂಘರ್ಷ ಇರುತ್ತದೆ ಎಂದು ವಾಗ್ಧಾಳಿ ನಡೆಸಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಆರೋಪ: ಇಂದು ಪುತ್ತೂರಿಗೆ ಯತ್ನಾಳ್ – Vishwanews24
