ಉರ್ವ ಸ್ಟೋರ್ ಅಂಚೆ ಕಚೇರಿ ಬಳಿ ನಿರ್ಮಾಣಗೊಳ್ಳಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನೂತನ ಪ್ರಧಾನ ಕಚೇರಿ ಸಂಕೀರ್ಣ #ಮತ್ಸ್ಯ_ಸಂಪದ ಇದರ ಶಿಲಾನ್ಯಾಸವನ್ನು ಶ್ರೀ ಪೇಜಾವರ ಅಧೋಕ್ಷಜ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನೆರವೇರಿಸಿ ಆಶೀರ್ವಚಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಫೆಡರೇಷನ್ ಅಧ್ಯಕ್ಷರಾದ Yashpal Anand Suvarna ವಹಿಸಿದರು.
ಈ ಸಂದರ್ಭದಲ್ಲಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ಶ್ರೀಪಾದರ ನೇತೃತ್ವದಲ್ಲಿ ಗೋರಕ್ಷಣೆಯ ಸೇವೆಯಲ್ಲಿ ನಿರತವಾಗಿರುವ ನೀಲಾವರ ಗೋಶಾಲೆಯ ಗೋವರ್ಧನ ಗಿರಿ ಟ್ರಸ್ಟಿಗೆ ರೂ. 2.50 ಲಕ್ಷದ ಚೆಕ್ಕನ್ನು ಫೆಡರೇಷನ್ ವತಿಯಿಂದ ಶ್ರೀಪಾದರಿಗೆ ನಾಡೋಜ ಡಾ ಜಿ. ಶಂಕರ್ ಹಸ್ತಾಂತರಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್, ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕರಾದ ಡಾ| ವೈ. ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಬಿ. ರವೀಂದ್ರ, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್, ಕಾಂಚನ ಹ್ಯುಂಡೈ ಆಡಳಿತ ನಿರ್ದೇಶಕರಾದ ಪ್ರಸಾದ್‍ರಾಜ್ ಕಾಂಚನ್, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವಾನಂದ ಗುರಿಕಾರ, ಮತ್ಸ್ಯೋದ್ಯಮಿಗಳಾದ ಆನಂದ ಪಿ. ಸುವರ್ಣ, ಮೋಹನ್ ಬೆಂಗ್ರೆ, ಶಶಿ ಕುಮಾರ್ (ಬಾಲು), ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹರೀಶ್ ಕುಮಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…