Featured

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನ : ತನಗೆ ಮತ ನೀಡಿ ಆಶೀರ್ವದಿಸಿದ ಎಲ್ಲರಿಗೂ ಆಭಾರಿಯಾಗಿರುತ್ತೇನೆ :ಮಿಥುನ್ ರೈ – Vishwanews24

ಮಂಗಳೂರು, : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ಮತದಾನದಲ್ಲಿ ದಾಖಲೆಯನ್ನು ನಿರ್ಮಿಸಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನವಾಗಿದೆ. 2014ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. ಮಾತ್ರವಲ್ಲ, ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಪ್ರತಿಕ್ರಿಯಿಸಿದ್ದು, ಮತದಾರರು ತನ್ನ ಅಭ್ಯರ್ಥಿತನದ ಮೇಲೆ ವಿಶ್ವಾಸವಿರಿಸಿ ಮತ ಚಲಾಯಿಸಿರುವುದು ಸಂತಸ ತಂದಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದಲ್ಲದೆ, ತನಗೆ ಮತ ನೀಡಿ ಆಶೀರ್ವದಿಸಿದ ಎಲ್ಲರಿಗೂ ಆಭಾರಿಯಾಗಿರುತ್ತೇನೆ ಎಂದು ಧನ್ಯವಾದಗಳನ್ನು ಹೇಳಿದ್ದಾರೆ.

ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತ ಮತ್ತು ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸಲು ಶ್ರಮಿಸಿದ ಅಧಿಕಾರಿ ವರ್ಗಕ್ಕೂ, ಅದೇ ರೀತಿಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago