ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಒಬ್ಬರ ನಾಮಪತ್ರ ತಿರಸ್ಕರವಾಗಿದ್ದು, ಇನ್ನೊಬ್ಬರು ನಾಮಪತ್ರ ಹಿಂಪಡೆದಿದ್ದಾರೆ.
ಅಭ್ಯರ್ಥಿಗಳು ಧಾರ್ಮಿಕ ಪ್ರದೇಶಗಳಿಗೆ ಭೇಟಿ ನೀಡಬಹುದು ಆದರೆ ಯಾವುದೇ ಕಾರಣಕ್ಕೂ ಮತ ಯಾಚಿಸುವಂತಿಲ್ಲ. ಯಾಚಿಸಿದ್ದು ತಿಳಿದರೆ ಜೀವನ ಪರ್ಯಾಂತ ಚುನಾವಣೆಯಲ್ಲಿ ಭಾಗವಹಿಸದಂತೆ ನೀತಿ ಸಂಹಿತೆ ಅನುಸಾರ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 17,24,566 ಮತದಾರರಿದ್ದು ಅದರಲ್ಲಿ ಮಹಿಳಾ ಮತದಾರರು 8,45,283 ಮತ್ತು 8,79,186 ಪುರುಷ ಮತದಾರರಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿವೆ:
ನಳಿನ್ ಕುಮಾರ್ ಕಟೀಲ್ (ಬಿಜೆಪಿ) ಮಿಥುನ್ ಎಂ ರಾಯ್ (ಕಾಂಗ್ರೆಸ್) ಎಸ್ ಸತೀಶ್ ಸಾಲಿಯಾನ್ (ಬಿಎಸ್ಪಿ) ಮೊಹಮ್ಮದ್ ಎಲಿಯಸ್ (ಎಸ್ಡಿಪಿಐ) ವಿಜಯ್ ಶ್ರೀನಿವಾಸ್ ಸಿ (ಉತ್ತರಾ ಪ್ರಜಾಕೀಯ ಪಕ್ಷದ) ಸುಪ್ರೀತ್ ಕುಮಾರ್ ಪೂಜಾರಿ (ಹಿಂದೂಸ್ಥಾನ್ ಜನತಾ ಪಾರ್ಟಿ) ಅಬ್ದುಲ್ ಹಮೀದ್ ಅಲೆಕ್ಸಾಂಡೆ ದೀಪಕ್ ರಾಜೇಶ್ ಕೋಲೋಹೋ ಮೊಹಮ್ಮದ್ ಖಾಲಿದ್, ಮ್ಯಾಕ್ಸಿಮ್ ಪಿಂಟೋ, ವೆಂಕಟೇಶ್ ಬೆಂಡೆ , ಎಚ್ ಸುರೇಶ್ ಪೂಜಾರಿ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…