Featured

ದಕ್ಷಿಣ ಭಾರತದಲ್ಲಿ ಕಮಲ ಅರಳಿಸಲು ಬಿಜೆಪಿ ಆರ್‌ಎಸ್‌ಎಸ್‌ ಜೊತೆ ಅಮಿತ್ ಶಾ ಮಾಸ್ಟರ್ ಪ್ಲಾನ್..

ಮಂಗಳೂರು : ದಕ್ಷಿಣ ಭಾರತದಲ್ಲಿ ಬಿಜೆಪಿ ನೆಲೆ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಆರ್‌ಎಸ್‌ಎಸ್‌ ರಣತಂತ್ರ ರೂಪಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಉಪಸ್ಥಿತಿಯಲ್ಲಿ ಬುಧವಾರ ರಾತ್ರಿ ನಡೆದ ಆರ್‌ಎಸ್‌ಎಸ್‌ ದಕ್ಷಿಣ ಭಾರತ ಪ್ರಚಾರ ಬೈಠಕ್ನಲ್ಲಿ ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ನೆಲೆಯನ್ನು ಗಟ್ಟಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆದಿದೆ.

ಶಬರಿಮಲೆ ವಿಷಯದಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರ ನಡೆದುಕೊಂಡ ರೀತಿಯನ್ನೇ ಪ್ರಮುಖ ವಿಷಯವನ್ನಾಗಿ ಮಾಡಲು ನಿರ್ಧರಿಸಿ, ಹಿಂದೂಗಳ ಭಾವನೆಗೆ ಸ್ಪಂದಿಸಿ ಅದನ್ನು ರಕ್ಷಿಸುವುದರ ಜತೆಗೆ ಕೇರಳ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸುವ ಕೆಲಸವೂ ಆಗಬೇಕು ಎಂಬ ಮಾತುಗಳು ಕೇಳಿ ಬಂದಿವೆ. ಕೇರಳದಲ್ಲಿ ಬಿಜೆಪಿ ನೆಲೆಯನ್ನು ವಿಸ್ತರಿಸಲು ಕಾರ್ಯಯೋಜನೆ ರೂಪಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ಆರ್‌ಎಸ್‌ಎಸ್‌ ಪ್ರಮುಖರು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎನ್‌ಡಿಎ ಮೈತ್ರಿಕೂಟದಿಂದ ಹೊರಹೋಗಿದ್ದು, ಅಲ್ಲಿಯೂ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಆಗಬೇಕಾಗಿದೆ. ಇದಕ್ಕಾಗಿ ಸೂಕ್ತ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳಬೇಕು. ತಮಿಳುನಾಡು, ತೆಲಂಗಾಣದಲ್ಲಿಯೂ ಪಕ್ಷದ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು. ಇದೆಲ್ಲವನ್ನೂ ಹಿಂದುತ್ವದ ಆಧಾರದಲ್ಲಿಯೇ ಕಾರ್ಯಗತಗೊಳಿಸಲು ಸಂಘದ ಪ್ರಮುಖರು ಸೂಚನೆ ನೀಡಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು :ಪ್ರಮುಖವಾಗಿ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಹಿಂದೂಗಳಿಗೆ ಭಾವನಾತ್ಮಕ ವಿಷಯವಾಗಿರುವ ರಾಮಮಂದಿರ ನಿರ್ಮಾಣವನ್ನು 2019 ರ ಲೋಕಸಭೆ ಚುನಾವಣೆಗೂ ಮೊದಲೇ ಕಾರ್ಯರೂಪಕ್ಕೆ ತರಬೇಕು ಎನ್ನುವ ಒತ್ತಾಯವನ್ನು  ಹಾಗೂ ಸಂಘದ ಪ್ರಮುಖರ ಸಲಹೆಗಳನ್ನು ಆಲಿಸಿದ ಅಮಿತ್‌ ಶಾ, ರಾಮಮಂದಿರ ಸೂಕ್ಷ್ಮ ವಿಷಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಾಗಿದೆ. ಈ ಕುರಿತು ವರಿಷ್ಠರ ಜತೆ ಚರ್ಚಿಸಿ, ಲೋಕಸಭೆ ಚುನಾವಣೆಗೂ ಮುನ್ನವೇ ಸ್ಪಷ್ಟ ನಿರ್ಧಾರಕ್ಕೆ ಬರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್‌ನ ಸರ ಕಾರ್ಯವಾಹ ಭಯ್ಯಾಜಿ ಸುರೇಶ್‌ ಜೋಷಿ, ಮುಕುಂದ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ನಾಲ್ಕು ರಾಜ್ಯಗಳ ಸಂಘಟನಾ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago