ಚಿಕ್ಕಮಗಳೂರು: ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು ಏಳು ದಿನಗಳ ಕಾಲ ಕಠಿಣ ವ್ರತದಲ್ಲಿದ್ದು, ಕೊನೆಯ ದಿನ (ನವೆಂಬರ್ 10 ರಂದು) ದತ್ತಪೀಠಕ್ಕೆ ಆಗಮಿಸುತ್ತಾರೆ. ಅಂದು, ದತ್ರಪೀಠದಲ್ಲಿ ಹೋಮ-ಹವನ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಏಳು ದಿನಗಳ ಕಾಲ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಅಲ್ಲದೇ, ಮುಂಜಾಗ್ರತ ಕ್ರಮವಾಗಿ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಮತ್ತು ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನವೆಂಬರ್ 9ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ.
ದತ್ತ ಮಾಲಾಧಾರಿಗಳು ನವೆಂಬರ್ 10ರಂದು ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ತಾಣಗಳಿಗೆ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕೆ ಆಗ್ರಹಿಸಿ ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ 21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆತಿದೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ಶ್ರೀಗುರುದತ್ತಾತ್ರೇಯರ ಭಕ್ತರು ಮಾಲೆ ಧರಿಸಿ, ಏಳು ದಿನಗಳ ಕಾಲ ವ್ರತಾಚರಣೆಯಲ್ಲಿರುತ್ತಾರೆ. ಏಳನೇ ದಿನ ದತ್ತಪೀಠಕ್ಕೆ ಭೇಟಿ ನೀಡುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…