ಲಂಡನ್:ಬ್ಯಾಂಕ್‌ಗಳೇ, ದಯವಿಟ್ಟು ನಿಮಗೆ ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ಶೇಕಡ 100ರಷ್ಟು ವಾಪಾಸು ತೆಗೆದುಕೊಳ್ಳಿ” ಎಂದು ವಿಜಯ್ ಮಲ್ಯ ಮನವಿ ಮಾಡಿದ್ದಾರೆ.
ಭಾರತಕ್ಕೆ ಗಡೀಪಾರು ಮಾಡುವ ಆದೇಶದ ವಿರುದ್ಧ ಬ್ರಿಟನ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿಯ ಮೂರು ದಿನಗಳ ವಿಚಾರಣೆಯ ಕೊನೆಯಲ್ಲಿ ಮಲ್ಯ ಈ ಕೋರಿಕೆ ಮುಂದಿಟ್ಟರು.
ಬ್ಯಾಂಕ್‌ಗಳಿಂದ ಪಡೆದ 9000 ಕೋಟಿ ರೂ. ವಾಪಾಸು ಮಾಡದೇ ವಂಚಿಸಿದ ಆರೋಪ ಎದುರಿಸುತ್ತಿರುವ ಕಿಂಗ್‌ಫಿಶರ್ಸ್ ಸಮೂಹದ ಮುಖ್ಯಸ್ಥ, “ಕಾನೂನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಒಂದೇ ಆಸ್ತಿಗಾಗಿ ಜಗಳವಾಡುತ್ತಿವೆ. ಆದರೆ ಈ ಪ್ರಕ್ರಿಯೆಯಲ್ಲಿ ನನ್ನನ್ನು ವಿವೇಚನಾಯುಕ್ತವಾಗಿ ನಡೆಸಿಕೊಳ್ಳುತ್ತಿಲ್ಲ” ಎಂದು ಆಪಾದಿಸಿದರು.
“ಬ್ಯಾಂಕ್‌ಗಳು ತಾವು ನೀಡಿದ ಮೂಲ ಹಣವನ್ನು ಶೇಕಡ 100ರಷ್ಟು ವಾಪಾಸು ತೆಗೆದುಕೊಳ್ಳುವಂತೆ ಕೈಮುಗಿದು ಮನವಿ ಮಾಡುತ್ತಿದ್ದೇನೆ” ಎಂದು ಲಂಡನ್‌ನಲ್ಲಿರುವ ರಾಯಲ್ ಕೋರ್ಟ್ ಆಫ್ ಜೆಸ್ಟೀಸ್‌ನ ಹೊರಗೆ ಸ್ಪಷ್ಟಪಡಿಸಿದರು.
“ನಾನು ಹಣ ಮರುಪಾವತಿ ಮಾಡಿಲ್ಲ ಎಂಬ ಬ್ಯಾಂಕ್‌ಗಳ ದೂರಿನ ಆಧಾರದಲ್ಲಿ ಜಾರಿ ನಿರ್ದೇಶನಾಲಯ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಆದರೆ ಈಡಿ ಸ್ವಯಂಪ್ರೇರಿತವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನಾನು ಪಿಎಂಎಲ್‌ಎ ಅಡಿಯಲ್ಲಿ ಯಾವುದೇ ಅಪರಾಧ ಎಸಗಿಲ್ಲ” ಎಂದು ಸಮರ್ಥಿಸಿಕೊಂಡರು.
“ಬ್ಯಾಂಕ್‌ಗಳು ತಮ್ಮ ಹಣ ತೆಗೆದುಕೊಳ್ಳಲಿ ಎಂದು ನಾನು ಹೇಳುತ್ತಿದ್ದೇನೆ. ಆದರೆ ಈಡಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಈ ಆಸ್ತಿಗಳ ಮೇಲೆ ನಮ್ಮ ಕ್ಲೇಮ್ ಇದೆ ಎಂದು ಹೇಳುತ್ತಿದೆ. ಹೀಗೆ ಈಡಿ ಹಾಗೂ ಬ್ಯಾಂಕ್‌ಗಳು ಒಂದೇ ಆಸ್ತಿಗಾಗಿ ಹೋರಾಡುತ್ತಿವೆ ಎಂದು ಬಣ್ಣಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…