ದಯವಿಟ್ಟು ನಿಮ್ಮ ಹಣ ತೆಗೆದುಕೊಳ್ಳಿ: ಭಾರತೀಯ ಬ್ಯಾಂಕುಗಳಿಗೆ ವಿಜಯ್ ಮಲ್ಯ -Vishwanews24

ಲಂಡನ್:ಬ್ಯಾಂಕ್‌ಗಳೇ, ದಯವಿಟ್ಟು ನಿಮಗೆ ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ಶೇಕಡ 100ರಷ್ಟು ವಾಪಾಸು ತೆಗೆದುಕೊಳ್ಳಿ” ಎಂದು ವಿಜಯ್ ಮಲ್ಯ ಮನವಿ ಮಾಡಿದ್ದಾರೆ.

ಭಾರತಕ್ಕೆ ಗಡೀಪಾರು ಮಾಡುವ ಆದೇಶದ ವಿರುದ್ಧ ಬ್ರಿಟನ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿಯ ಮೂರು ದಿನಗಳ ವಿಚಾರಣೆಯ ಕೊನೆಯಲ್ಲಿ ಮಲ್ಯ ಈ ಕೋರಿಕೆ ಮುಂದಿಟ್ಟರು.

ಬ್ಯಾಂಕ್‌ಗಳಿಂದ ಪಡೆದ 9000 ಕೋಟಿ ರೂ. ವಾಪಾಸು ಮಾಡದೇ ವಂಚಿಸಿದ ಆರೋಪ ಎದುರಿಸುತ್ತಿರುವ ಕಿಂಗ್‌ಫಿಶರ್ಸ್‌ ಸಮೂಹದ ಮುಖ್ಯಸ್ಥ, “ಕಾನೂನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಒಂದೇ ಆಸ್ತಿಗಾಗಿ ಜಗಳವಾಡುತ್ತಿವೆ. ಆದರೆ ಈ ಪ್ರಕ್ರಿಯೆಯಲ್ಲಿ ನನ್ನನ್ನು ವಿವೇಚನಾಯುಕ್ತವಾಗಿ ನಡೆಸಿಕೊಳ್ಳುತ್ತಿಲ್ಲ” ಎಂದು ಆಪಾದಿಸಿದರು.

“ಬ್ಯಾಂಕ್‌ಗಳು ತಾವು ನೀಡಿದ ಮೂಲ ಹಣವನ್ನು ಶೇಕಡ 100ರಷ್ಟು ವಾಪಾಸು ತೆಗೆದುಕೊಳ್ಳುವಂತೆ ಕೈಮುಗಿದು ಮನವಿ ಮಾಡುತ್ತಿದ್ದೇನೆ” ಎಂದು ಲಂಡನ್‌ನಲ್ಲಿರುವ ರಾಯಲ್ ಕೋರ್ಟ್ ಆಫ್ ಜೆಸ್ಟೀಸ್‌ನ ಹೊರಗೆ ಸ್ಪಷ್ಟಪಡಿಸಿದರು.

“ನಾನು ಹಣ ಮರುಪಾವತಿ ಮಾಡಿಲ್ಲ ಎಂಬ ಬ್ಯಾಂಕ್‌ಗಳ ದೂರಿನ ಆಧಾರದಲ್ಲಿ ಜಾರಿ ನಿರ್ದೇಶನಾಲಯ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಆದರೆ ಈಡಿ ಸ್ವಯಂಪ್ರೇರಿತವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನಾನು ಪಿಎಂಎಲ್‌ಎ ಅಡಿಯಲ್ಲಿ ಯಾವುದೇ ಅಪರಾಧ ಎಸಗಿಲ್ಲ” ಎಂದು ಸಮರ್ಥಿಸಿಕೊಂಡರು.

“ಬ್ಯಾಂಕ್‌ಗಳು ತಮ್ಮ ಹಣ ತೆಗೆದುಕೊಳ್ಳಲಿ ಎಂದು ನಾನು ಹೇಳುತ್ತಿದ್ದೇನೆ. ಆದರೆ ಈಡಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಈ ಆಸ್ತಿಗಳ ಮೇಲೆ ನಮ್ಮ ಕ್ಲೇಮ್ ಇದೆ ಎಂದು ಹೇಳುತ್ತಿದೆ. ಹೀಗೆ ಈಡಿ ಹಾಗೂ ಬ್ಯಾಂಕ್‌ಗಳು ಒಂದೇ ಆಸ್ತಿಗಾಗಿ ಹೋರಾಡುತ್ತಿವೆ ಎಂದು ಬಣ್ಣಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago