Featured

ದರ್ಶನ್ ಅರೆಸ್ಟ್ – ಕಾನೂನು ಎಲ್ಲರಿಗೂಒಂದೇ  ; ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ : ಜಿ.ಪರಮೇಶ್ವರ್ – vishwanews24

ದರ್ಶನ್ ಅರೆಸ್ಟ್ – ಕಾನೂನು ಎಲ್ಲರಿಗೂ ಒಂದೆ: ಯಾರೇ ತಪ್ಪು ಮಾಡಿದ್ರೂ ಕ್ರಮ

ಕೊಲೆ ಕೇಸ್‌ನಿಂದ ಬಚಾವಾಗಲು ಪ್ರಯತ್ನ ಮಾಡಿರೋದು ಗೊತ್ತಿಲ್ಲ

ರೇಣುಕಾಸ್ವಾಮಿ ಕೊಲೆ ಕೇಸ್ ಸಿಬಿಐಗೆ ಕೊಡುವ ಅಗತ್ಯವಿಲ್ಲ..

ಬೆಂಗಳೂರು: ‘ಎಲ್ಲರಿಗೂ ಕಾನೂನು ಒಂದೇ. ನಟ ದರ್ಶನ್‌ಗು ಕಾನೂನು ಒಂದೇ, ಪರಮೇಶ್ವರ್‌ಗು ಒಂದೇ ಕಾನೂನು. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ‌. ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ‌. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು.ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ನಟ ದರ್ಶನ್ ಕೇಸ್ ಕೊಟ್ಟಿದ್ದರೆ ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು. ಆದರೆ, ಘಟನೆ ನಡೆದು ಹೋಗಿದೆ. ಯಾರು ಏನು ಮಾಡುವುದಕ್ಕೆ ಆಗುವುದಿಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಇಲಾಖೆ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಕೊಲೆ ಕೇಸ್‌ನಿಂದ ಬಚಾವಾಗಲು ಪ್ರಯತ್ನ ಮಾಡಿರೋದು ಗೊತ್ತಿಲ್ಲ: ನಟ ದರ್ಶನ್ ಪ್ರಕರಣದಿಂದ ಬಚಾವ್ ಆಗಲು ಪ್ರಭಾವಿ ರಾಜಕಾರಣಿಯಿಂದ ಪ್ರಯತ್ನ ಮಾಡಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನನಗೆ ಗೊತ್ತಿರುವಂತೆ ಯಾರು ಸಹ ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನೆಲ್ಲ‌ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಅದನ್ನು ಪೊಲೀಸರು ಮಾಡುತ್ತಾರೆ. ಇದರಲ್ಲಿ ಸರ್ಕಾರದಿಂದ ನಾವ್ಯಾರು ಮಧ್ಯ ಪ್ರವೇಶಿಸುವುದಿಲ್ಲ. ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ಸಚಿವ ಪರಮೇಶ್ವರ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಕೇಸ್ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದ 13 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ. ತನಿಖೆ ಪೂರ್ಣವಾದ ಬಳಿಕ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು ನಾವು ಕೇಳುವುದಿಲ್ಲ, ಅವರೂ ನಮಗೆ ಹೇಳುವುದಿಲ್ಲ. ನಟ ದರ್ಶನ್ ಅವರ ಘಟನೆಗಳು ಇದೇ ಮೊದಲಲ್ಲ. ಮಾಧ್ಯಮಗಳಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಪೊಲೀಸರು ತನಿಖೆ ಮಾಡುತ್ತಾರೆ. ತನಿಖೆ ನಂತರ ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ನೋಡಬೇಕು. ಪೊಲೀಸರಿಗೆ ಫ್ರೀ ಹ್ಯಾಂಡ್ ಇದೆ. ಸೆಕ್ಷನ್ ಹಾಕುವುದಕ್ಕೆ ಅವರು ಸಮರ್ಥರು. ನಮ್ಮನ್ನು ಕೇಳಿಕೊಂಡು ಸೆಕ್ಷನ್ ಹಾಕುವುದಿಲ್ಲ ಎಂದು ಹೇಳಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago