ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು.ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ನಟ ದರ್ಶನ್ ಕೇಸ್ ಕೊಟ್ಟಿದ್ದರೆ ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು. ಆದರೆ, ಘಟನೆ ನಡೆದು ಹೋಗಿದೆ. ಯಾರು ಏನು ಮಾಡುವುದಕ್ಕೆ ಆಗುವುದಿಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಇಲಾಖೆ ಕೈಗೊಳ್ಳುತ್ತದೆ ಎಂದು ತಿಳಿಸಿದರು.
ಕೊಲೆ ಕೇಸ್‌ನಿಂದ ಬಚಾವಾಗಲು ಪ್ರಯತ್ನ ಮಾಡಿರೋದು ಗೊತ್ತಿಲ್ಲ: ನಟ ದರ್ಶನ್ ಪ್ರಕರಣದಿಂದ ಬಚಾವ್ ಆಗಲು ಪ್ರಭಾವಿ ರಾಜಕಾರಣಿಯಿಂದ ಪ್ರಯತ್ನ ಮಾಡಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನನಗೆ ಗೊತ್ತಿರುವಂತೆ ಯಾರು ಸಹ ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಅದನ್ನು ಪೊಲೀಸರು ಮಾಡುತ್ತಾರೆ. ಇದರಲ್ಲಿ ಸರ್ಕಾರದಿಂದ ನಾವ್ಯಾರು ಮಧ್ಯ ಪ್ರವೇಶಿಸುವುದಿಲ್ಲ. ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ಸಚಿವ ಪರಮೇಶ್ವರ ತಿಳಿಸಿದರು.
ರೇಣುಕಾಸ್ವಾಮಿ ಕೊಲೆ ಕೇಸ್ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದ 13 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ. ತನಿಖೆ ಪೂರ್ಣವಾದ ಬಳಿಕ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು ನಾವು ಕೇಳುವುದಿಲ್ಲ, ಅವರೂ ನಮಗೆ ಹೇಳುವುದಿಲ್ಲ. ನಟ ದರ್ಶನ್ ಅವರ ಘಟನೆಗಳು ಇದೇ ಮೊದಲಲ್ಲ. ಮಾಧ್ಯಮಗಳಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಪೊಲೀಸರು ತನಿಖೆ ಮಾಡುತ್ತಾರೆ. ತನಿಖೆ ನಂತರ ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ನೋಡಬೇಕು. ಪೊಲೀಸರಿಗೆ ಫ್ರೀ ಹ್ಯಾಂಡ್ ಇದೆ. ಸೆಕ್ಷನ್ ಹಾಕುವುದಕ್ಕೆ ಅವರು ಸಮರ್ಥರು. ನಮ್ಮನ್ನು ಕೇಳಿಕೊಂಡು ಸೆಕ್ಷನ್ ಹಾಕುವುದಿಲ್ಲ ಎಂದು ಹೇಳಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…