ದರ್ಶನ್ ಜಾಮೀನು ಅರ್ಜಿ: ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್ – vishwanews24
ದರ್ಶನ್ ಜಾಮೀನು ಅರ್ಜಿ: ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಮಧ್ಯಂತರ ಜಾಮೀನು ಆದೇಶವನ್ನು ಹೈಕೋರ್ಟ್ ನಾಳೆಗೆ ಕಾಯ್ದಿರಿಸಿದೆ.
ಮಧ್ಯಂತರ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಿತು. ಆರೋಪಿ ಪರ ವಕೀಲ ನಾಗೇಶ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ದರ್ಶನ್ ಜಾಮೀನು ಭವಿಷ್ಯ ಬುಧವಾರ ನಿರ್ಧಾರ ಆಗಲಿದೆ.
